ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ..B Saroja Devi Passes Away

B Saroja Devi
Published on

ಬೆಂಗಳೂರು: ( B Saroja Devi )  ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ವಯೋಸಜಹಜ ಕಾಯಿಲೆಯಿಂದ (ಜುಲೈ 14)ರಂದು ಸಾವನ್ನಪ್ಪಿದ್ದಾರೆ.

ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಬಿ ಸರೋಜಾ ದೇವಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು.

1938 ಜನವರಿ 7 ರಂದು ಬೆಂಗಳೂರಿನಲ್ಲಿ ಜನಿಸಿದ ಬಿ ಸರೋಜಾದೇವಿ. ಚಿತ್ರರಂಗದಲ್ಲಿ ಗುರುತಿದಿಕೊಂಡಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.

ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀಸರಸ್ವತಿ, ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು.

ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲೆಯಾಳಂನ ಮುತ್ತುಮಿಂತ್ರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net