More

    ಕನ್ನಡದ ಚಿತ್ರರಂಗದ ‘ನಂದಾದೀಪ’ ಲೀಲಮ್ಮರ ಅಪರೂಪದ ಫೋಟೋಗಳು ಇಲ್ಲಿವೆ…

    ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಲೀಲಾವತಿ, ಎಲ್ಲರ ನೆಚ್ಚಿನ ಲೀಲಮ್ಮ ಇಂದು ಸಂಜೆ ವಯೋಸಹಜ ಕಾಯಿಲೆಯಿಂದ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಕನ್ನಡ ಚಿತ್ರರಂಗದ ನಕ್ಷತ್ರವೊಂದು ಮಿಂಚಿ ಮರೆಯಾಗಿದೆ. 600 ಚಿತ್ರಗಳಲ್ಲಿ ನಟಿಸಿದ್ದ ಲೀಲಾವತಿ ಅವರು 70ರ ದಶಕದಲ್ಲಿ ಮುಂಚೂಣಿ ನಾಯಕಿಯಾಗಿದ್ದರು. ತಮ್ಮ ಸಹಜ ಸೌಂದರ್ಯ, ಮನೋಜ್ಞ ಅಭಿನಯದಿಂದಲೇ ಎಲ್ಲರ ಮನೆ ಮಾತಾಗಿದ್ದರು. ಇದೀಗ ಬಾರದ ಲೋಕಕ್ಕೆ ಪಯಣಿಸಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಸೋಲದೇವನ ಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ನಾಳೆ (ಡಿ.09) ಅಂತ್ಯಕ್ರಿಯೆ ನಡೆಯಲಿದೆ. ಕನ್ನಡ ಚಿತ್ರರಂಗದ ಲೀಲಮ್ಮ ಎಂದೇ ಖ್ಯಾತರಾಗಿದ್ದ ಲೀಲಾವತಿ ಅವರ ಅಪರೂಪದ ಫೋಟೋಳನ್ನು ನೀವಿಲ್ಲಿ ನೋಡಬಹುದು.

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    Veteran actress leelavathi

    ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಂಜೆ ನಿಧನರಾಗಿದ್ದಾರೆ. ಲೀಲಾವತಿ ಅವರು ಇರುವರೆಗೂ ಅವರಿಗಾಗಿಯೇ ಪ್ರತಿಕ್ಷಣ ಬದುಕಿದ್ದ ಪುತ್ರ ವಿನೋದ್​ ರಾಜ್​ ಅವರನ್ನು ಅಗಲಿ, ಬಾರದ ಲೋಕಕ್ಕೆ ಪಯಣಿಸಿದ್ದಾರೆ.

    1938ರಲ್ಲಿ ಲೀಲಾ ಕಿರಣ್​ ಆಗಿ ಜನಿಸಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಬಳಿಕ ಲೀಲಾವತಿಯಾಗಿ ಗುರುತಿಸಿಕೊಂಡ ಕನ್ನಡಿಗರ ನೆಚ್ಚಿನ ಲೀಲಮ್ಮ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ನಟಿಸಿದ್ದಾರೆ. 50 ವರ್ಷದ ವೃತ್ತಿ ಜೀವನದಲ್ಲಿ ಸುಮಾರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡವೊಂದರಲ್ಲೇ 400ಕ್ಕೂ ಅಧಿಕ ಸಿನಿಮಾಗಳಲ್ಲಿ ತಮ್ಮ ಅಮೋಘ ಅಭಿನಯ ಮೂಲಕ ಅಸಂಖ್ಯಾತ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು.

    ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಾಂ ಸಿನಿಮಾಗಳಲ್ಲಿನ ಅವರ ಅಭಿನಯ ಎಂದಿಗೂ ಮರೆಯುವಂತಿಲ್ಲ. ಇದಿಷ್ಟೇ ಅಲ್ಲದೆ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ ಸಿನಿಮಾಗಳಲ್ಲಿ ನಟಿಸಿದ್ದಾರೆ. 70 ದಶಕದಲ್ಲಿ ಮುಂಚೂಣಿ ನಾಯಕಿಯರಲ್ಲಿ ಲೀಲಾವತಿ ಕೂಡ ಒಬ್ಬರಾಗಿದ್ದರು.

    ಹಿರಿಯ ನಟಿ ಲೀಲಾವತಿ ನಿಧನ: ವಿನೋದ್​ ರಾಜ್​​ ಬಗ್ಗೆ ಭಾವುಕ ಮಾತುಗಳನ್ನಾಡಿದ ಶಿವಣ್ಣ

    ಅಮ್ಮನ ಅಗಲಿಕೆಯಿಂದ ಒಬ್ಬಂಟಿಯಾದ ವಿನೋದ್​ ರಾಜ್​… ಶನಿವಾರ ನೆಲಮಂಗಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts