ಭೋಪಾಲ್: ಉತ್ತರಪ್ರದೇಶದ ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ (83) ಶುಕ್ರವಾರ (ಮಾರ್ಚ್ 01) ನಿಧನರಾಗಿದ್ದಾರೆ.
ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಭೋಪಾಲ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಳಗ್ಗೆ 11 ಘಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಇಂದು (ಮಾರ್ಚ್ 01) ಸಂಜೆ ಅವರ ಅಂತ್ಯೆಕ್ರಿಯೆ ಜರುಗಲಿದೆ ಎಂದು ಅವರ ಸಂಬಂಧಿ ಸೂಫಿಯಾನ್ ಅಲಿ ತಿಳಿಸಿದ್ದಾರೆ.
ಈ ಹಿಂದೆ ಮಧ್ಯಪ್ರದೇಶ ಉರ್ದು ಅಕಾಡೆಮಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಖುರೇಷಿ 1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1984ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಖುರೇಷಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ಧಾರೆ