ಹಿರಿಯ ಪತ್ರಕರ್ತ ಜಯಕರ ಸುವರ್ಣ ನಿಧನ

udp-6-jayakara suvarna
Published on

ಉಡುಪಿ: ದೂರದರ್ಶನ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಸೋಮವಾರ ರಾತ್ರಿ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 2014 ರಿಂದ 17ರವರೆಗೆ ಸೇವೆ ಸಲ್ಲಿಸಿದ್ದ ಅವರು, ದ.ಕ. ಫೊಟೊಗ್ರಾಫರ್ಸ್​ ಅಸೋಸಿಯೇಶನ್​, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ ಸುವರ್ಣ ನಿಧನಕ್ಕೆ ಉಡುಪಿ ಕಾರ್ಯನಿರತ ಪತ್ರಕರ್ತರ ಸಂಘ, ಫೊಟೊಗ್ರಾಫರ್ಸ್​ ಅಸೋಸಿಯೇಶನ್​, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​, ಶಾಸಕ ಯಶಪಾಲ್​ ಸುವರ್ಣ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net