More

    ಪಶುಸಂಗೋಪನಾ ವಾರ್ ರೂಮ್ ಸದ್ಯದಲ್ಲೇ ಲೋಕಾರ್ಪಣೆ; ಸಚಿವ ಪ್ರಭು ಚವ್ಹಾಣ್

    ಬೆಂಗಳೂರು; ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಸುಸಜ್ಜಿತವಾದ ವಾರ್ ರೂಮ್ ಅನುಷ್ಠಾನಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

    ರೈತರು, ಜಾನುವಾರು ಸಾಕಾಣೆದಾರರು, ಪ್ರಾಣಿಪ್ರಿಯರು ಇದರ ಅನುಕೂಲ ಪಡೆಯಬಹುದಾಗಿದೆ. ಜಾನುವಾರುಗಳ ಆರೋಗ್ಯ, ಸಾಕುವ ವಿಧಾನ, ಆರೋಗ್ಯ ಸಮಸ್ಯೆ, ತಕ್ಷಣಕ್ಕೆ ಚಿಕಿತ್ಸೆ, ಔಷಧೋಪಚಾರ ಇತ್ಯಾದಿಗಳ ಬಗ್ಗೆ ವಿಷಯ ತಜ್ಞರು ವಾರ್ ರೂಮ್ ಮೂಲಕ ಮಾಹಿತಿ ನೀಡಲಿದ್ದಾರೆ.

    ವಾರ್ ರೂಮ್ ದಿನದ 24)( 7 ಕಾರ್ಯನಿರ್ವಹಿಸಲಿದ್ದು, ಪಶುಸಂಗೋಪನೆ ಇಲಾಖೆಯ  4212 ಸಂಸ್ಥೆಗಳು, 2900 ಪಶುವೈದ್ಯರು ಮತ್ತು 2200   ಪಶುವೈದ್ಯಕೀಯ ಸಿಬ್ಬಂದಿ ಹೆಚ್ಚಿನ ಸೇವೆ ಒದಗಿಸಲಿದ್ದಾರೆ ಎಂದು ಹೇಳಿದ್ದಾರೆ.

    ಪ್ರತಿಕ್ರಿಯಾ ತಂಡವು ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸಲಿವೆ. ವಾರ್ ರೂಮ್ ಗೆ ಕರೆ ಬಂದ ಕೆಲವೆ ಗಂಟೆಗಳಲ್ಲಿ ತಂಡ ಮಾಹಿತಿ ಆಧಾರದ ಮೇಲೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಹಾರ ನೀಡಲಿದೆ.

    ವಾರ್ ರೂಮ್ ವೈಶಿಷ್ಠ್ಯತೆಗಳು:
    ಟೋಲ್ ಫ್ರೀ ನಂಬರ್ ವ್ಯವಸ್ಥೆ ಒಳಗೊಂಡಿದೆ. ಪಶುಸಂಗೋಪನಾ ಕ್ಷೇತ್ರದಲ್ಲಿನ ಅಧುನಿಕ ವಿಧಾನಗಳ ಬಗ್ಗೆ ಇ-ಮೇಲ್, ಹತ್ತಿರದ ಪಶುವೈದ್ಯ ಸಂಸ್ಥೆ, ಮುದ್ರಿತ ಪ್ರತಿ, ಆಡಿಯೋ ವಿಡಿಯೋ, ಸಾಮಾಜಿಕ ಜಾಲತಾಣಗಳ ಮೂಲಕ ರೈತರಿಗೆ   ನಿರಂತರವಾಗಿ ಮಾಹಿತಿ ನೀಡಲಾಗುತ್ತದೆ.

    ಪಶುಸಂಜೀವಿನಿ, ಅಂಬುಲೇಟರಿ ಕ್ಲಿನಿಕ್‌ಗಳನ್ನು ತಜ್ಞ ವೈದ್ಯರೊಂದಿಗೆ ಚಿಕಿತ್ಸೆಗೆ  ವ್ಯವಸ್ಥೆ ಮಾಡಲಾಗುವುದು. ತಜ್ಞರೊಂದಿಗೆ ಜಾನುವಾರುಗಳ ಆರೋಗ್ಯ, ಆಹಾರ, ಔಷಧಿಗಳ ಕುರಿತು ಸಂವಹನ ನಡೆಸುವ ವ್ಯವಸ್ಥೆ, ಚಿಕಿತ್ಸಾಲಯಗಳಲ್ಲಿ ವೈದ್ಯರ ಲಭ್ಯತೆಯನ್ನು ತಂತ್ರಜ್ಞಾನ ಆಧಾರಿತವಾಗಿ ತಿಳಿಸುವ ವ್ಯವಸ್ಥೆ ದೊರೆಯಲಿದೆ.

    ಬಿಡಾಡಿ ದನ ಹಾಗೂ  ಇತರೆ ಪ್ರಾಣಿಗಳ ಬಗ್ಗೆ ಸಾರ್ವಜನಿಕರು ನೀಡುವ ದೂರು  ಆಧರಿಸಿ ಹತ್ತಿರದ ಪಶುವೈದ್ಯರು ಚಿಕಿತ್ಸೆ ನೀಡುವಂತೆ ನೋಡಿಕೊಳ್ಳುವುದು.

    ತಂತ್ರಜ್ಞಾನ ಬಳಸಿ ಗೋಶಾಲೆಗಳ ನಿರ್ವಹಣೆ ಮತ್ತು ಮಾಹಿತಿ ನೀಡುವುದು. ಗೋಹತ್ಯೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಕುರಿತು ಸಾರ್ವಜನಿಕರಿಂದ ಬರುವ ದೂರುಗಳನ್ನು ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವುದು.

    ಲಭ್ಯ ತಂತ್ರಜ್ಞಾನವನ್ನು ಬಳಸಿ ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ ಮಾಹಿತಿ ನೀಡುವುದು.  ರೈತರ ಕುಂದುಕೊರತೆಗಳ ಬಗ್ಗೆ ದೂರವಾಣಿ ಮೂಲಕ ನೀಡುವ ಮಾಹಿತಿಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸಿ ಸೂಕ್ತ ಪರಿಹಾರವನ್ನು ಒದಗಿಸುವುದು ವಾರ್ ರೂಮ್ ವೈಶಿಷ್ಟ್ಯಗಳಾಗಿವೆ ಎಂದರು.

    ಇದನ್ನೂ ಓದಿ; ಟ್ವಿಟರ್​ನಲ್ಲಿ ಉಪೇಂದ್ರಗೆ 1 ಮಿಲಿಯನ್ ಫಾಲೋವರ್ಸ್; ಸ್ಯಾಂಡಲ್​ವುಡ್​​ನಲ್ಲಿ ಗರಿಷ್ಠ ಫಾಲೋವರ್ಸ್​ ಹೊಂದಿರುವ 2ನೇ ನಟ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts