More

    VIDEO | ರಾಜಧಾನಿಯಲ್ಲಿಯೂ ಶುರುವಾಯ್ತು ಪಠಾಣ್ ಬಾಯ್ಕಾಟ್; ಸಿನಿಮಾ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

    ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯಿಸಿರುವ ವಿವಾದಿತ ಪಠಾಣ್ ಸಿನಿಮಾ ಇಂದು ದೇಶದಾದ್ಯಂತ ಬಿಡುಗಡೆಯಾಗಿದೆ. ಆರಂಭದಿಂದಲೂ ಈ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಇದೀಗ ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ, ರಾಜ್ಯ ರಾಜಧಾನಿಯಲ್ಲೂ ಪಠಾಣ್ ಸಿನಿಮಾ ಬಾಯ್ಕಾಟ್ ಎಂಬ ಕೂಗು ಹೆಚ್ಚಾಗಿ ಕೇಳಿ ಬಂದಿದೆ.

    ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿ, ಪಠಾಣ್ ಬಾಯ್ಕಟ್ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೆ ಸಿನಿಮಾ ಪೋಸ್ಟರ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬೆಳಗಾವಿಯಲ್ಲೂ ಸಿನಿಮಾ ವಿರುದ್ಧ ಆಕ್ರೋಶದ ಕೂಗು ಕೇಳಿ ಬಂದಿದೆ. ನಗರದ ನರ್ತಿಕಿ ಮತ್ತು ಸ್ವರೂಪ ಚಿತ್ರಮಂದಿರದ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆ ದಾಳಿ ಮಾಡಿ ಚಿತ್ರದ ಪೋಸ್ಟರ್​ಗಳನ್ನು ಹರಿದು ಹಾಕಿದ್ದಾರೆ ಎಂದು ವರದಿಯಾಗಿದೆ.

    ಶಾರುಖ್​ ಖಾನ್ 4 ವರ್ಷಗಳ ಬಳಿಕ ಪಠಾಣ್​ ಸಿನಿಮಾದ ಮೂಲಕ ಮತ್ತೊಮ್ಮೆ ಬೆಳ್ಳಿ ಪರದೆ ಮೇಳೆ ದರ್ಶನ ನೀಡಿದ್ದಾರೆ. ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ 4 ಸಿನಿಮಾ ಇದಾಗಿದೆ.

    ಪಠಾಣ್ ಸಿನಿಮಾವನ್ನು ಬರೋಬ್ಬರಿ 250 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾಗಿದೆ.ಯಾವಾಗ ಬೇಷರಮ್ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿಯಲ್ಲಿ ಕಾಣಿಸಿಕೊಂಡರೋ, ಅಂದಿನಿಂದ ಸಿನಿಮಾಗೆ ಬಾಯ್ಕಾಟ್ ಬಿಸಿ ತಟ್ಟಿತು.

    ಪಠಾಣ್‌ ಸಿನಿಮಾ ಬಾಯ್ಕಟ್ ವಿವಾದ ಕಾವು ಪಡೆದುಕೊಂಡಿರುವಾಗಲೇ ತನ್ನ ಹಕ್ಕುಗಳನ್ನು ಪ್ರಮುಖ ಒಟಿಟಿ ವೇದಿಕೆಯಾದ ಅಮೆಜಾನ್ ಪ್ರೈಮ್​ಗೆ ಮಾರಾಟವಾಗಿದ್ದು, ಅಮೆಜಾನ್ ಪ್ರೈಮ್ ಬರೋಬ್ಬರಿ 100 ಕೋಟಿ ರೂ. ನೀಡಿ ವಿವಾದಿತ ಪಠಾಣ್ ಸಿನಿಮಾವನ್ನು ಖರೀದಿಸಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಅಮೆಜಾನ್ ಪ್ರೈಮ್​ನಲ್ಲಿ ಪಠಾಣ್ ಪ್ರದರ್ಶನ ಕಾಣಲಿದೆ ಎಂದು ಅಂದಾಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts