More

    ಏಳು ನೂತನ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ; ಯಾರು, ಎಲ್ಲಿಗೆ? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜ್ಯ ಸರ್ಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಇದನ್ನೂ ಓದಿ: ವಿಮಾನದಲ್ಲೇ ಹೃದಯಾಘಾತ; ಆಕಾಶದಲ್ಲೇ ಹಾರಿಹೋದ ಪ್ರಾಣಪಕ್ಷಿ

    ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ.ಕೆ.ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ. ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ.ಆರ್​.ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್‌.ಗೋಗಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ. ಡಾ.ಬಿ.ಎಸ್‌.ಬಿರಾದಾರ್​ ಅವರನ್ನು ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌. ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ. ನಿವೃತ್ತ ಪ್ರೊಫೆಸರ್‍‌ ಆಗಿರುವ ಡಾ.ಟಿ.ಸಿ.ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸರ್ಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ಉದ್ದೇಶದಿಂದ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts