More

    ಅರ್ಥಶಾಸ್ತ್ರ ಓದದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣ

    ಮಂಡ್ಯ: ಕೆಎಎಸ್‌ ಮತ್ತು ಐಎಎಸ್‌ ಸೇರಿದಂತೆ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅರ್ಥಶಾಸ್ತ್ರದ ವಿಷಯಗಳಲ್ಲಿಯೇ ಸ್ಪರ್ಧಾರ್ಥಿಗಳು ಅನುತ್ತೀರ್ಣರಾಗುತ್ತಿರುವುದು ದುರಂತ ಎಂದು ತೂಬಿನಕೆರೆ ಸರ್‌ಎಂ.ವಿ.ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ಎಚ್‌.ಆರ್‌.ಉಮಾ ಬೇಸರ ವ್ಯಕ್ತಪಡಿಸಿದರು.
    ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ವೇದಿಕೆಯಿಂದ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ–2022 ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
    ಅರ್ಥಶಾಸ್ತ್ರದ ಬಗ್ಗೆ ಉದಾಸೀನ ವಹಿಸಿರುವುದರಿಂದ ಕೆಎಎಸ್‌ ಮತ್ತು ಐಎಎಸ್‌ ಸೇರಿದಂತೆ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರುವ ಈ ವಿಷಯಗದಲ್ಲಿ ಅನುತ್ತೀರ್ಣರಾಗುತ್ತಿರುವುದು ಇತ್ತೀಚೆಗೆ ಕಂಡು ಬರುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ಸಲಹೆ ನೀಡುವುದು ಮುಖ್ಯವಾಗಬೇಕು. ಯಾವುದೇ ಕಾರಣಕ್ಕೆ ಅರ್ಥಶಾಸ್ತ್ರ ವಿಷಯದಲ್ಲಿ ಉದಾಸೀನ ತೋರುವುದು ಬೇಡ. ಇದರಿಂದ ವಿದ್ಯಾರ್ಥಿಗಳಿಗೆ ನಷ್ಟವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
    ಡಾ.ಆರ್‌.ಎಚ್‌.ಪವಿತ್ರಾ, ಡಿಡಿಪಿಯು ಉಪ ನಿರ್ದೇಶಕ ಎಸ್‌.ಉಮೇಶ್, ಪ್ರೊ.ಬಿ.ಎಸ್‌.ಬೋರೇಗೌಡ, ಡಿ.ನಾಗರಾಜು, ಜಿ.ಎನ್‌.ನಾಗೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts