25.9 C
Bengaluru
Wednesday, January 22, 2020

ಸಂತ್ರಸ್ತರ ಕಣ್ಣೀರು ಒರೆಸಲು ಪ್ರಯತ್ನ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕೊಕಟನೂರ: ಕೃಷ್ಣಾ ನದಿಯ ಪ್ರವಾಹದಿಂದ ಪ್ರವಾಹ ಪೀಡಿತ ಅಥಣಿ ತಾಲೂಕಿನ ಸವದಿ ದರ್ಗಾ ಬಳಿ ಇರುವ ಜೀರೋ ಪಾಯಿಂಟ್, ಸತ್ತಿ, ರಡ್ಡೇರಹಟ್ಟಿ ಮತ್ತು ಹಲ್ಯಾಳ ಗ್ರಾಮದ ನೆರೆ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ಅಥಣಿ ತಾಲೂಕಿನ ಜನವಾಡ, ಮಹಿಷವಾಡಗಿ, ನಂದೇಶ್ವರ, ಸವದಿ ದರ್ಗಾ ಗ್ರಾಮದ ನೆರೆ ಸಂತ್ರಸ್ತರಿಗಾಗಿ ಹೊಸ ಸವದಿ ಹಾಗೂ ಜೀರೋ ಪಾಯಿಂಟ್ ಬಳಿ ಇರುವ ಪುನರ್ವಸತಿ ಕೇಂದ್ರದಲ್ಲಿ ಕೆಲವರಿಗೆ ಮನೆ ಜಾಗ ನೀಡಿದ್ದಾರೆ, ಕೆಲವರಿಗೆ ಜಾಗ ನೀಡಿಲ್ಲ. ಕೇಂದ್ರದಲ್ಲಿ ಮೂಲ ಸೌಕರ್ಯಗಳಿಲ್ಲ. ಅಲ್ಲಿರಲು ಸೂಚಿಸಿದರೆ ನಾವು ಹೇಗೆ ಹೋಗಿರಲು ಸಾಧ್ಯ ಎಂದು ಸಂತ್ರಸ್ತರು ಅಳಲು ತೋಡಿಕೊಂಡರು.

ಮನೆ ಕಟ್ಟಲು 5 ಲಕ್ಷ ರೂ.ಹಾಗೂ ಎಕರೆ ಬೆಳೆ ಹಾನಿಗೆ ಕನಿಷ್ಠ 50 ಸಾವಿರ ನೀಡಬೇಕು ಎಂದು ಆಗ್ರಹಿಸಿದರು. ಇನ್ನೂ ಸತ್ತಿ ಹಾಗೂ ಹಲ್ಯಾಳ ಗ್ರಾಮದ ನೆರೆ ಸಂತ್ರಸ್ತರಿಗೆ ಸುರಕ್ಷಿತ ಸ್ಥಳದಲ್ಲಿ ವಾಸಿಸಲು ಜಾಗವಿಲ್ಲ. 2005 ರಲ್ಲಿ ಪ್ರವಾಹ ಬಂದಾಗ ಪ್ರವಾಹ ಪೀಡಿತ ಗ್ರಾಮವೆಂದು ಅಂದಿನ ಸರ್ಕಾರ ಘೋಷಿಸಿದರೂ ಶಾಶ್ವತ ಪರಿಹಾರ ನೀಡಿಲ್ಲ ಎಂದು ದೂರಿದರು.

ಜನರ ಅಹವಾಲು ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜತೆ ಮಾತನಾಡಿ ಶಾಶ್ವತ ಪರಿಹಾರ ಮತ್ತು ಜಾಗದ ಜತೆಗೆ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ., ಎಕರೆ ಬೆಳೆ ಹಾನಿಗೆ 1 ಲಕ್ಷ ರೂ. ನೀಡಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಲಾಗುವುದು. ಸಂತ್ರಸ್ತರ ಕಣ್ಣೀರು ಒರೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಸರ್ಕಾರ ನೆರವಿಗೆ ಬಾರದೆ ಇದ್ದಲ್ಲಿ ಹೋರಾಟ ಮಾಡಿ ಎಚ್ಚರಿಸುತ್ತೇವೆ ಎಂದರು.

ಮಾಜಿ ಶಾಸಕ ಷಹಜಹಾನ್ ಡೊಂಗರಗಾಂವ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಸತ್ಯಪ್ಪ ಬಾಗೆಣ್ಣವರ, ವಿನಾಯಕ ದೇಸಾಯಿ, ಸುರೇಶ ಪಾಟೀಲ, ಎಸ್.ಕೆ.ಬುಟಾಳಿ, ಗಜಾನನ ಮಂಗಸೂಳಿ, ಬಸವರಾಜ ಬುಟಾಳಿ, ರಮೇಶ ಸಿಂದಗಿ, ಅನಿಲ ಸುಣಧೋಳಿ, ಸಿದ್ಧಾರ್ಥ ಶಿಂಗೆ, ನಿಶಾಂತ ದಳವಾಯಿ, ರಿಯಾಜ್ ಡೊಂಗರಗಾಂವ, ಅಸ್ಲಂ ನಾಲಬಂದ್, ಸೈಯದ್ ಗಡ್ಡೇಕರ್, ರಾವಸಾಬ ಐಹೊಳೆ, ಧರೆಪ್ಪ ಠಕ್ಕಣ್ಣವರ ಇತರರು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...