

Victory Celebration: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ರಾಜಧಾನಿಯ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಶನಿವಾರ ಸಂಜೆ ಹೈಕಮಾಂಡ್ ನಾಯಕರು ಸೇರಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
BJP ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಮೋದಿ ಮಾಜಿ ಸಿಎಂ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರಾದ ಅಮಿತ್ ಷಾ, ಜೆ.ಪಿ. ನಡ್ಡಾ ಸೇರಿದಂತೆ ಎಲೆಕ್ಷನ್ನಲ್ಲಿ ಗೆದ್ದ ಅಭ್ಯರ್ಥಿಗಳು ಇದ್ದರು.