ಕಾಂಗ್ರೆಸ್, ಬಿಜೆಪಿ ಬೆಂಬಲಿತರಿಗೆ ಗೆಲುವು

New Project (3)
Published on

ಬೆಳ್ತಂಗಡಿ: ತಾಲೂಕಿನ ಎರಡು ಗ್ರಾಪಂ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಬೆಂಬಲಿತರು ತಲಾ ಒಂದೊಂದು ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.

ಹೊಸಂಗಡಿ ಗ್ರಾಪಂ 3ನೇ ವಾರ್ಡ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆಲುವು ಪಡೆದಿದ್ದಾರೆ.

ಆನಂದ ಬಂಗೇರ ಅವರಿಗೆ 457ಮತಗಳು ಲಭಿಸಿದ್ದು, ಅವರ ವಿರುದ್ಧ ಬಿಜೆಪಿ ಬೆಂಬಲಿತರಾಗಿ ಕಣಕ್ಕಿಳಿದ ಸುನೀಲ್ ಶೆಟ್ಟಿ ಅವರಿಗೆ 274 ಮತಗಳು ಲಭಿಸಿದೆ. ಆನಂದ ಬಂಗೇರ 183 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸದಸ್ಯ ಹರಿಪ್ರಸಾದ್ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು.

ಪುದುವೆಟ್ಟು ಗ್ರಾಪಂ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಪಡೆದಿದ್ದಾರೆ. ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮೀ 372 ಮತದಿಂದ ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕಿಳಿದ ಸಿಂಧು ಅವರಿಗೆ ಕೇವಲ 120 ಮತಗಳು ಲಭಿಸಿತ್ತು. 372 ಮತಗಳ ಅಂತರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಪಡೆದರು. ಬಿಜೆಪಿ ಬೆಂಬಲಿತ ಸದಸ್ಯೆ ಅನಿತಾ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net