VIDEO| ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿಗೆ ಗುದ್ದಿದ ಬಸ್; ಮೂವರು ಸಾವು

BUS Accident
Published on

ಅಮರಾವತಿ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ವೇಟಿಂಗ್​ ಲಾಂಜ್​ಗೆ ಗುದ್ದಿದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಪಂಡಿತ್​ ಜವಾಹರಲಾಲ್​ ನೆಹರೂ ಬಸ್​ ನಿಲ್ದಾಣದಲ್ಲಿ ನಡೆದಿದೆ.

ಘಟನೆಯ ದೃಶ್ಯ ಬಸ್​ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯಲ್ಲಿ ಹಲವರು ಗಂಭಿರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಪಾರ್ಕಿಂಗ್​ನಲ್ಲಿ ಪ್ರಯಾಣಿಕರಿಗಾಗಿ ನಿಂತಿರುವ ಬಸ್​ ಏಕಾಏಕಿ ಚಾಲಕ ನ ನಿಯಂತ್ರಣ ತಪ್ಪಿ ಮುಂದಕ್ಕೆ ಬರಲು ಆರಂಭಿಸುತ್ತದೆ. ನೋಡನೋಡುತ್ತಿದ್ದಂತೆ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಗುದ್ದಿದ ಬಸ್​ ಬಳಿಕ ಅಲ್ಲಿದ್ದ ಪಿಲ್ಲರ್​ ಬಳಿ ನಿಲ್ಲುತ್ತದೆ. ಇದನ್ನು ಗಮನಿಸಿದ ಬಸ್​ ನಿಲ್ದಾಣದಲ್ಲಿದ್ದ ಸಿಬ್ಬಂದಿ ಹಾಗೂ ಜನರು ಕೂಡಲೇ ಗಾಯಾಳುಗಳ ನೆರವಿಗೆ ಧಾವಿಸುತ್ತಿರುವುದು ಕಂಡು ಬರುತ್ತದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​. ಜಗನ್​ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net