VIDEO: ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಸಹಿಸಂಗ್ರಹ

ABVP signature campaign against drug mafia at vijayapura
Published on

ವಿಜಯಪುರ: ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಸದ್ದು ಮಾಡ್ತಿರುವ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ವಿಜಯಪುರದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು. ಇನ್ನೂ ಡ್ರಗ್ಸ್ ದಂಧೆ ಹಿಂದೆ ರಾಷ್ಟ್ರಾಘಾತುಕರ ಸಂಚಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿದ್ದವರನ್ನು ದೇಶದ್ರೋಹಿ ಪ್ರಕರಣ ದಾಖಲಿಸಿ ಎಂದು ಆಗ್ರಹಿಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದ ಹೊರ ಆವರಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಸಹಿ ಸಂಗ್ರಹಕ್ಕೆ ಕರೆ ನೀಡಿದ್ರು. ಚಿತ್ರರಂಗದ ನಟ-ನಟಿಯರು ಸೇರಿ ಡ್ರಗ್ಸ್ ಸೇವಿಸುವ ಚಟದಲ್ಲಿರುವವರನ್ನು ಮುಲಾಜಿಲ್ಲದೆ ಬಂಧಿಸಬೇಕು. ರಾಜ್ಯದ ಯುವ ಸಮುದಾಯವನ್ನು ಕಾಪಾಡಬೇಕು ಎಂದು ಆಗ್ರಹಿಸಿ ಮನವಿ ಮಾಡಿದರು.

ಅಭಿಮಾನಿಗಳಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳು ಇಂದು ಚಿತ್ರರಂಗದ ನಟ-ನಟಿಯರು ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದಾರೆ ಎಂಬುದು ನಾಚಿಕೆಗೇಡಿನ ಸಂಗತಿ. ಇವರಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳಿದ್ದು, ಅನುಕರಿಸಲು ಪ್ರಯತ್ನಿಸುತ್ತಾರೆ. ಪೊಲೀಸ್ ಇಲಾಖೆ ಯಾರ ಮುಲಾಜಿಗೂ ಒಳಗಾಗದೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net