More

  ತಾಂತ್ರಿಕ ದೋಷ; ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್​ ಇಂಡಿಯಾ ವಿಮಾನ

  ದೇವನಹಳ್ಳಿ: ಬೆಂಗಳೂರಿನಿಂದ ಕೊಚ್ಚಿಯತ್ತ ಹೊರಟಿದ್ದ ಏರ್​ ಇಂಡಿಯಾ ವಿಮಾನವು ತಾಂತ್ರಿಕ ದೋಷದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ರಾತ್ರಿ 11.20ರ ಸುಮಾರಿಗೆ ಈ ಘಟನೆ ನಡೆದಿದೆ.

  ಈ ಕುರಿತು ಪ್ರತಿಕ್ರಿಯಿಸಿರುವ ಏರ್​ ಇಂಡಿಯಾದ ಸಿಬ್ಬಂದಿಯೊಬ್ಬರು, ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ವಿಮಾನ ಟೇಕ್​​ ಆಫ್ ಆಗಿತ್ತು.  ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಲಾಗಿದೆ.

  ಇದನ್ನೂ ಓದಿ: ಕಲಬುರಗಿ To ಬೆಳಗಾವಿ ವಿಮಾನ ಸಂಚಾರ ಆರಂಭ; ಟಿಕೆಟ್​ ಬೆಲೆ ಕೇಳಿದರೆ ನೀವು ಶಾಕ್​ ಆಗುವುದಂತು ಖಂಡಿತಾ

  ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಏರ್​ ಇಂಡಿಯಾದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

  ಮೇ 17 ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದ ಬೆಂಕಿ ಕಾಣಿಸಿಕೊಂಡಿತ್ತು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್​ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಲರ್ಟ್ ಮಾಡಿದ್ದು, ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡ್​ ಮಾಡಿದ್ದರು. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts