ಮುಂಬೈ: ವಿಶ್ವದ ಮಿಲಿಯನ್ ಡಾಲರ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದ್ದು, ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹಾಲಿ ಆವೃತ್ತಿಯಲ್ಲಿ ಹಲವು ಸ್ವಾರಸ್ಯಕರ ಘಟನೆಗಳು ನಡೆಯುತ್ತಿದ್ದು, ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇದಕ್ಕೆ ಪೂರಕವೆಂಬಂತೆ ಘಟನೆಯೊಂದು ನಡೆದಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಹಾಲಿ ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಭರ್ಜರಿ ಪ್ರದರ್ಶನ ನೀಡುತ್ತಿರುವ ವೇಗಿ ಜಸ್ಪ್ರೀತ್ ಬುಮ್ರಾ ಅತ್ಯಧಿಕ ವಿಕೆಟ್ಗಳನ್ನು ಪಡೆಯುವ ಮೂಲಕ ಪರ್ಪಲ್ ಕ್ಯಾಪನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ ಲಖನೌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋತರೂ ವೇಗಿ ಬುಮ್ರಾ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲರ ಮನೆಗೆಲ್ಲುತ್ತಿದೆ.
That kid now has a core memory for life 🥹💙#MumbaiMeriJaan #MumbaiIndians #LSGvMI | @Jaspritbumrah93 pic.twitter.com/CcS1tdjYzB
— Mumbai Indians (@mipaltan) May 1, 2024
ಇದನ್ನೂ ಓದಿ: ಲೋಕಸಭೆ ಚುನಾವಣೆ; ಪ್ರಧಾನಿ ಮೋದಿ ಎದುರು ಸ್ಪರ್ಧಿಸುವುದಾಗಿ ಘೋಷಿಸಿದ ಖ್ಯಾತ ಕಾಮಿಡಿಯನ್
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ, ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಪಂದ್ಯ ಮುಗಿದ ಬಳಿಕ ವೇಗಿ ಬುಮ್ರಾ ಆಟಗಾರರ ಜೊತೆ ಡಗೌಟ್ ಕಡೆ ತೆರಳುತ್ತಿರುತ್ತಾರೆ. ಈ ವೇಳೆ ಬಾಲಕನೋರ್ವ ಬುಮ್ರಾ ಅವರನ್ನು ಮಾತನಾಡಿಸುತ್ತಾನೆ. ಈ ವೇಳೆ ಅಭಿಮಾನಿ ಕೂಗಿಗೆ ಪ್ರತಿಕ್ರಿಯಿಸುವ ಬುಮ್ರಾ ತಮ್ಮ ಪರ್ಪಲ್ ಕ್ಯಾಪ್ಅನ್ನು ಅತನಿಗೆ ನೀಡಿ ಸಹಿ ಮಾಡುತ್ತಾರೆ. ಇದನ್ನು ಕಂಡು ಬಾಲಕ ಖುಷಿಯಿಂದ ಸಂಭ್ರಮಿಸುವುದನ್ನು ನೋಡಬಹುದಾಗಿದೆ.
ಈ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದು, ಆ ಬಾಲಕನಿಗೆ ಜೀವನದಲ್ಲಿ ಒಂದು ಸ್ಮರಣಿಯ ಉಡುಗೊರೆ ಸಿಕ್ಕಿದೆ ಎಂದು ಬರೆದುಕೊಂಡಿದೆ. ಇತ್ತ ಬುಮ್ರಾ ಅವರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯೆ ಮಹಾಪೂರವೇ ಹರಿದು ಬರುತ್ತಿದೆ.