More

  Video: ಮುಂಬೈ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದರಂತ

  ಮುಂಬೈ: ಇಲ್ಲಿನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿಕೆಸಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.

  ಇದನ್ನೂ ಓದಿ: ಸಾಕುನಾಯಿ ಅನುಮಾನಾಸ್ಪದ ಸಾವು: ನ್ಯಾಯಕ್ಕಾಗಿ ಹೈಕೋರ್ಟ್ ಮೊರೆಹೋದ ಸ್ಟಾರ್​ ನಟಿ!

  ಕೌಟುಂಬಿಕ ನ್ಯಾಯಾಲಯದ ಬಳಿ ಇರುವ ವಸತಿ ವೇತನ ಮತ್ತು ಖಾತೆಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನದಲ್ಲಿ ಕೆಲಸ ನಡೆಯುತ್ತಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.

  ಘಟನೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ಅಗ್ನಿ ದುರಂತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

  ಈ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆಯಿಂದ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

  ಶಾಪಿಂಗ್ ಮಾಲ್​ನಲ್ಲಿ ಚಾಕುವಿನಿಂದ ಇರಿದು 6 ಜನರ ಬರ್ಬರ ಹತ್ಯೆ! ಆರೋಪಿಗೆ ಸ್ಥಳದಲ್ಲೇ ಗುಂಡೇಟು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts