More

    Viral video: ಬಿಜೆಪಿಗೆ ಮತ ಹಾಕ್ತೇನೆ ಎಂದ ಅಜ್ಜಿಗೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಅಭ್ಯರ್ಥಿ!

    ತೆಲಂಗಾಣ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದರೂ ತಮಗೆ ಪಿಂಚಣಿ ಹಣ ಸಿಕ್ಕಿಲ್ಲ ಎಂದ ಮಹಿಳೆಗೆ ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್ ರೆಡ್ಡಿ ರೈತ ಮಹಿಳೆಯೊಬ್ಬರ ಕೆನ್ನೆಗೆ ಹೊಡೆದಿದ್ದಾರೆ.
    ಚುನಾವಣಾ ಪ್ರಚಾರದ ವೇಳೆ ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ವಿಡಿಯೋ ನೋಡಿದ ಹರ್ಷಿಕಾ ಪೂಣಚ್ಚ ಶಾಕ್​ ಕಾಮೆಂಟ್ಸ್​?

    ವೃದ್ದ ಮಹಿಳೆಯ ಕೆನ್ನೆಗೆ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೀವನ್ ರೆಡ್ಡಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

    ವೈರಲ್ ಆಗಿರುವ ವೀಡಿಯೊದಲ್ಲಿ, ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೀವನ್ ರೆಡ್ಡಿ, ವಯಸ್ಸಾದ ಮಹಿಳೆಗೆ ಕೆನ್ನೆಗೆ ಬಾರಿಸಿ ನಗುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಜೀವನ್ ರೆಡ್ಡಿಯ ಇತರ ಸಹಚರರು ನಗುತ್ತಿರುವ ದೃಶ್ಯ ಕೂಡ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದರೂ ಪಿಂಚಣಿ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ಈ ಬಾರಿ ಚುನಾವಣೆಯಲ್ಲಿ ‘ಹೂವಿನ ಚಿಹ್ನೆ’ಗೆ (ಬಿಜೆಪಿ) ಮತ ಹಾಕುವುದಾಗಿ ಮಹಿಳೆ ಹೇಳಿದ್ದು, ಇದರಿಂದ ರೊಚ್ಚಿಗೆದ್ದ ರೆಡ್ಡಿ ಅವರಿಗೆ ಕನ್ನೆಗೆ ಹೊಡಿದ್ದಾರೆ.
    ಮಹಿಳೆಗೆ ಕೆನ್ನೆಗೆ ಹೊಡೆದಿರುವ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೀವನ್ ರೆಡ್ಡಿ, ‘ನೋ, ನಾನು ಆಕೆಗೆ ಹೊಡೆದಿಲ್ಲ ಹೀಗೆ ಮಾಡಿದೆ ಅಷ್ಟೇ. ಇಟ್ ವಾಸ್ ಲೌವ್ಲೀ.. ಇಟ್ ವಾಸ್ ಲೌವ್ಲೀ.. ಇಟ್ ವಾಸ್ ಲೌವ್ಲೀ ಎಂದು ಹೇಳಿದ್ದಾರೆ.

    ನಿಜಾಮಾಬಾದ್ ಲೋಕಸಭಾ ಕ್ಷೇತ್ರವು ತೆಲಂಗಾಣ ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರಸ್ತುತ ಕ್ಷೇತ್ರವನ್ನು ಬಿಜೆಪಿಯ ಧರ್ಮಪುರಿ ಅರವಿಂದ್ ಪ್ರತಿನಿಧಿಸುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಧರ್ಮಪುರಿ ಮತ್ತು ಕಾಂಗ್ರೆಸ್‌ನ ರೆಡ್ಡಿ ಕ್ಷೇತ್ರದಿಂದ ಕಣದಲ್ಲಿದ್ದಾರೆ. ನಿಜಾಮಾಬಾದ್ ಲೋಕಸಭಾ ಕ್ಷೇತ್ರ ಸೇರಿದಂತೆ ತೆಲಂಗಾಣದ ಎಲ್ಲಾ 17 ಲೋಕಸಭಾ ಸ್ಥಾನಗಳಿಗೆ ಮೇ 13 ರಂದು ನಾಲ್ಕನೇ ಹಂತದ ಲೋಕಸಭೆ ಮತದಾನದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

    ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ, ಐವರು ಯೋಧರಿಗೆ ಗಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts