More

    ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಪ್ರಕರಣ; ರಾಜಕೀಯ ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದು ಸರಿಯಿಲ್ಲ ಎಂದು ಕಿಡಿಕಾರಿದ ಅಣ್ಣಾಮಲೈ

    ಚೆನ್ನೈ:ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಭಾರತದ ಧ್ವಜ ಹಿಡಿದು ಬಂದಿದ್ದ ಕ್ರೀಡಾಭಿಮಾನಿಗಳನ್ನು ಪೊಲೀಸ್​ ಅಧಿಕಾರಿ ತಡೆದ ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ವಿರುದ್ಧ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ಭಾರತದ ಧ್ವಜವನ್ನು ತೆಗೆದುಕೊಂಡು ಹೋಗದಂತೆ ಪೊಲೀಸರಿಗೆ ತಡೆಯಲು ಅವಕಾಶ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

    ಭಾರತ ಹಾಗೂ ಪಾಕಿಸ್ತಾನದ ವಿರುದ್ಧದ ಪಂದ್ಯದ ವೇಳೆ ಜೈ ಶ್ರೀರಾಮ್​ ಎಂದು ಘೋಷಣೆ ಕೂಗಿದ್ದಕ್ಕೆ ಸಚಿವ ಉದಯನಿಧಿ ಸ್ಟಾಲಿನ್​ ಆಕ್ಷೇಪ ವ್ಯಕ್ತಪಡಿಸಿದ್ದರು. ಪಾಕಿಸ್ತಾನದಲ್ಲಿ ನಮ್ಮ ಆಟಗಾರರನ್ನು ಅವರು ನಡೆಸಿಕೊಂಡಂತಹ ರೀತಿಯನ್ನು ಉದಯನಿಧಿ ಸ್ಟಾಲಿನ್​ ಅವರು ಮರೆತಂತೆ ಕಾಣುತ್ತಿದೆ.

    ಇದನ್ನೂ ಓದಿ: ಗುಜರಾತಿನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; ಓರ್ವ ಮೃತ್ಯು

    ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ಪೊನ್ಮುಡಿ ಅವರ ಪುತ್ರ ತಮಿಳುನಾಡು ಕ್ರಿಕೆಟ್​ ಅಸೋಸಿಯೇಷನ್​ ಅಧ್ಯಕ್ಷ ಅಶೋಕ್ ಸಿಗಮಣಿ ತಮ್ಮ ರಾಜಕೀಯ ಪ್ರಚಾರವನ್ನು ಒಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ದಿದ್ದು, ನಮ್ಮ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ದೇಶದ ಧ್ವಜವನ್ನು ತೆಗೆದುಕೊಂಡು ಹೋಗದಂತೆ ನಿರ್ಭಂಧಿಸಲು ಇವರಿಗೆ ಅವಕಾಶ ನೀಡಿದವರು ಯಾರು ಎಂದು ಪ್ರಶ್ನಸಿದ್ದಾರೆ.

    ನಮ್ಮ ರಾಷ್ಟ್ರಧ್ವಜವನ್ನು ಅವಮಾನ ಮಾಡಿದ ಪೊಲೀಸ್​ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಿ ಡಿಎಂಕೆ ರಾಷ್ಟ್ರದ ಜನರ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ತ್ರಿವರ್ಣ ಧ್ವಜದ ಪಾವಿತ್ರ್ಯತೆಗೆ ಚ್ಯುತಿ ತಂದಿರುವ ಈ ಭ್ರಷ್ಟ ಡಿಎಂಕೆ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts