VIDEO| ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥನ ಬಂಧನ ​

Bike-Stunt-Mumbai
Published on

ಮುಂಬೈ: ಯುವಕನೊಬ್ಬ ಇಬ್ಬರು ಯುವತಿಯರನ್ನು ಬೈಕಿನಲ್ಲಿ ಕೂರಿಸಿಕೊಂಡು ವೀಲ್ಹಿಂಗ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ತಪ್ಪಿತಸ್ಥನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಬಂಧಿತ ಯುವಕ 24 ವರ್ಷ ಪ್ರಾಯದವನಾಗಿದ್ದು ಇಬ್ಬರು ಯುವತಿಯರನ್ನು ಬೈಕಿನಲ್ಲಿ ಕೂರಿಸಿಕೊಂಡು ವೀಲ್ಹಿಂಗ್​ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್​​(BKC) ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ಮೊದಲು ಆರೋಪಿ ವಿರುದ್ಧ ಆ್ಯಂಟೋಪ್​ ಹಿಲ್​​, ವಡಾಲಾ ಟಿಟಿ ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಆರೋಪಿ ಯುವಕನ ವಿರುದ್ಧ ಭಾರತ ದಂಡ ಸಂಹಿತೆ(IPC) 308 ಮತ್ತು ಮೋಟಾರು ವಾಹನ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ವೈಡಲ್​ ಆಗಿದ್ದ ವಿಡಿಯೋದಲ್ಲಿ ಯುವಕನೊಬ್ಬ ಇಬ್ಬರು ಯುವತಿಯರನ್ನು ತನ್ನ ಗಾಡಿಯ ಪೆಟ್ರೋಲ್​ ಟ್ಯಾಂಕ್​ ಹಾಗೂ ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡಿರುವುದು ಕಂಡು ಬರುತ್ತದೆ. ಬಳಿಕ ಅಪಾಯಕಾರಿಯಾಗಿ ವೀಲ್ಹಿಂಗ್​ ಮಾಡುತ್ತಾ ಸಾಗುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net