

ಹೈದರಾಬಾದ್: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು ಅದೃಷ್ಟವಶಾತ್ ಬಾಲಕ ಪ್ರಾಣಪಾಯದಿಂದ ಪಾರಾಗಿರುವ ಘಟನೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಸೂರಾರಂ ವ್ಯಾಪ್ತಿಯ ಶ್ರೀರಾಮ್ನಗರದಲ್ಲಿ ನಡೆದಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕ ತನ್ನ ಸ್ನೇಹಿತನೊಂದಿಗೆ ಮನೆ ಮುಂಭಾಗ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಯೊಂದು ದಿಢೀರ್ ಎಂದು ಅವನ ಮೇಲೆ ದಾಳಿ ಮಾಡುತ್ತದೆ.
ಈ ವೇಳೆ ದೃತಿಗೆಡದ ಬಾಲಕ ನಾಯಿಯ ಜೊತೆ ಹೋರಾಡಿ ಅದನ್ನು ಹಿಮ್ಮೆಟ್ಟಿಸಿ ಒಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಾಲಕನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ನಿವಾಸಿ ಒಬ್ಬರು ಹಲವು ದಿನಗಳಿಂದ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ಧಾರೆ.
ಬೀದಿ ನಾಯಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕನ್ನು ಆತನ ಪೋಷಕರು ಹೆಚ್ಚಿನ ಚಿಕತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ಧಾರೆ.