More

    ಲಕ್ಷ್ಮಣನನ್ನು ನಿಂದಿಸಿ ಧೂಮಪಾನ ಮಾಡಿದ ಸೀತೆ; ವೈರಲ್​ ಆಗುತ್ತಿದೆ ವಿಡಿಯೋ

    ಪುಣೆ: ಜನವರಿ 22ರಂದು ಸಂಪನ್ನಗೊಂಡ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯದ ಕುರಿತು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದರು. ಏತನ್ಮಧ್ಯೆ ಪುಣೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆ ವಿದ್ಯಾರ್ಥಿ ಗುಂಪಿನ ನಡುವೆ ಹೊಡೆದಾಟಕ್ಕೆ ಕಾರಣವಾಗಿದೆ.

    ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ರಾಮಲೀಲಾ ನಾಟಕದಲ್ಲಿ ಈ ರೀತಿಯ ಆಕ್ಷೇಪಾರ್ಹ ದೃಶ್ಯಗಳು ಕಂಡುಬಂದಿದ್ದು, ಇದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ಆಕ್ಷೇಪ ವ್ಯಕ್ತಪಡಿಸಿ ದೂರು ದಾಖಲಿಸಿದೆ.

    ವೈರಲ್​ ಆಗಿರುವ ವಿಡಿಯೋದಲ್ಲಿ ಸೀತಾ ಮಾತೆಯ ವೇಷ ಧರಿಸಿರುವ ನಟಿ ಧೂಮಪಾನ ಮಾಡುತ್ತಿರುವುದನ್ನು ನೋಡಬಹುದಾಗಿದೆ. ನಂತರ ಲಕ್ಷ್ಮಣ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದಡಿ ದೂರು ದಾಖಲಾಗಿದೆ.

    ಇದನ್ನೂ ಓದಿ: ಪೂನಂ ಪಾಂಡೆ ಸಾವಿನ ಸುದ್ದಿ ನಿಜವಾಗಿರುವುದಕ್ಕೆ ಸಾಧ್ಯವಿಲ್ಲ: ಮಾಜಿ ಪತಿ ಬಿಚ್ಚಿಟ್ಟ ಸ್ಫೋಟಕ ಮಾಹಿತಿ

    ಈ ಕುರಿತು ಪ್ರತಿಕ್ರಿಯಿಸಿರುವ ಪುಣೆ ವಿಶ್ವವಿದ್ಯಾಲಯದ ಎಬಿವಿಪಿ ಅಧ್ಯಕ್ಷ ಶಿವ ಬರೋಲೆ, ಲಲಿತಾ ಕಲಾ ಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕವು ಆಕ್ಷೇಪಕಾರಿಯಾಗಿದ್ದು, ಧಾರ್ಮಿಕ ಭಾವನೆಗಳಿಗ್ಗೆ ಧಕ್ಕೆ ಉಂಟು ಮಾಡಿದೆ. ಈ ಸಂಬಂಧ ದೂರು ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ನಾಟಕ ಪ್ರದರ್ಶನ ಸಂಬಂಧ ಪೊಲೀಸರು ಪ್ರವೀಣ್ ಭೋಲೆ, ಭವೇಶ್ ಪಾಟೀಲ್, ಜಯ್ ಪೆಡ್ನೇಕರ್, ಪ್ರಥಮೇಶ್ ಸಾವಂತ್, ಹೃಷಿಕೇಶ್ ದಾಲ್ವಿ ಮತ್ತು ಯಶ್ ಚಿಖ್ಲೆ ಸೇರಿದಂತೆ ಆರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC Section) 295A, 294, 143, 147, 149, 323 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪುಣೆ ವಿಶ್ವವಿದ್ಯಾಲಯದ ಎಬಿವಿಪಿ ಅಧ್ಯಕ್ಷ ಶಿವ ಬರೋಲೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts