ಹಾಸನ: ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟದಿಂದ ರೋಸಿಹೋಗಿದ್ದ ಗ್ರಾಮಸ್ಥರು, ಅಧಿಕಾರಿಗಳು ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಸ್ವತಃ ತಾವೇ ಮದ್ಯದ ಪ್ಯಾಕೆಟ್ಗಳನ್ನು ವಶಪಡಿಸಿಕೊಂಡು ರಸ್ತೆಯಲ್ಲಿ ಸುರಿದು ನಾಶಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂದೇ ಗ್ರಾಮದ ಸುಮಾರು 40 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ವ್ಯಸನಿಗಳು ಗ್ರಾಮದಲ್ಲಿ ಎಲ್ಲೆಂದರಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನ ಆಗಿರಲಿಲ್ಲ.
ಇದನ್ನೂ ಓದಿ: ಟೀಕೆ ಮಾಡುವವರಿಗೆ ಸೊಪ್ಪು ಹಾಕಲ್ಲ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲ ಸೇರಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಹೋರಾಟ ಮಾಡಿದ್ದಾರೆ. ಮದ್ಯ ಮಾರುತ್ತಿದ್ದವರ ಮನೆಗಳಿಗೆ ನುಗ್ಗಿ ಮದ್ಯ ಪ್ಯಾಕೆಟ್ಗಳನ್ನು ವಶಕ್ಕೆ ಪಡೆದು ತಂದು, ಗ್ರಾಮದ ರಸ್ತೆ ಮಧ್ಯದಲ್ಲಿ ಸುರಿದು ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ರೂಸ್ ಪಾರ್ಟಿಗೆ ಆರ್ಯನ್ನ ಕರ್ಕೊಂಡು ಹೋಗಿದ್ರು! ಮಹಾ ಸಚಿವನಿಂದ ಮತ್ತಷ್ಟು ಸ್ಫೋಟಕ ಹೇಳಿಕೆ