VIDEO VIRAL | ಕುಡಿದು ಕಾರು ಚಾಲನೆ ಮಾಡಿ ಅಪಘಾತ ಮಾಡಿದವನಿಗೆ ಮಹಿಳೆಯಿಂದ ಚಪ್ಪಲಿ ಏಟು!

ವಿಜಯಪುರ: ಈತ  ಕಾರನ್ನು ಕುಡಿದು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದ. ಅದರ ಪರಿಣಾಮವಾಗಿ ಅಪಘಾತವಾಗಿದ್ದು ಬೈಕ್​ ಹಾಗೂ ಆಟೋ ರಿಕ್ಷಾದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇದರಿಂದ ಸಿಟ್ಟಿಗೆದ್ದ ಮಹಿಳೆಯೊಬ್ಬರು ಕಾರಿನ ಬಳಿ ತೆರಳಿ ಚಾಲಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ನಶೆ ಇಳಿಸಿದ್ದಾರೆ! ನಿನ್ನೆ ರಾತ್ರಿ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಮದ್ಯ ಸೇವಿಸಿ ನಶೆಯಲ್ಲಿದ್ದ ಕಾರು ಚಾಲಕ, ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಎರಡು ಅಟೋ ಹಾಗೂ ಒಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದ. ಈ ಘಟನೆಯಿಂದ … Continue reading VIDEO VIRAL | ಕುಡಿದು ಕಾರು ಚಾಲನೆ ಮಾಡಿ ಅಪಘಾತ ಮಾಡಿದವನಿಗೆ ಮಹಿಳೆಯಿಂದ ಚಪ್ಪಲಿ ಏಟು!