More

    ಸಿಮ್್ಸ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ

    ಶಿವಮೊಗ್ಗ: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧಮೇಗೌಡರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಬಳಿಕ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು.ಸರ್ಕಾರದ ಪರವಾಗಿ ಡಿಸಿ ಕೆ.ಬಿ.ಶಿವಕುಮಾರ್ ಹಾಗೂ ಎಸ್ಪಿ ಕೆ.ಎಂ.ಶಾಂತರಾಜು ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿಟ್ಟು ಗೌರವ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಕೋಲ್ಡ್ ಸ್ಟೋರೇಜ್ ಪೆಟ್ಟಿಗೆಯಲ್ಲಿರಿಸಿ ಸಕಲ ಗೌರವಗಳೊಂದಿಗೆ ಆಂಬುಲೆನ್ಸ್ ಮೂಲಕ ಕಡೂರು ತಾಲೂಕಿನ ಸಖರಾಯಪಟ್ಟಣಕ್ಕೆ ಕಳುಹಿಸಲಾಯಿತು.

    ಡಿಎಚ್​ಒ ಡಾ. ರಾಜೇಶ್ ಸುರಗೀಹಳ್ಳಿ, ಸಿಮ್್ಸ ನಿರ್ದೇಶಕ ಡಾ. ಒ.ಎಸ್.ಸಿದ್ಧಪ್ಪ, ಮುಖ್ಯ ಆಡಳಿತಾಧಿಕಾರಿ ಡಾ. ಶಿವಕುಮಾರ್, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಶ್ರೀಧರ್ ಸ್ಥಳದಲ್ಲಿದ್ದು ಮರಣೋತ್ತರ ಪರೀಕ್ಷೆಗೆ ಅನುವು ಮಾಡಿಕೊಟ್ಟರು.

    ಮರಣೋತ್ತರ ಪರೀಕ್ಷೆ ಹಿನ್ನೆಲೆಯಲ್ಲಿ ಶವಗಾರದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಡಿವೈಎಸ್ಪಿ ಉಮೇಶ್ ನಾಯ್್ಕ ಸಿಪಿಐಗಳಾದ ಕೆ.ಟಿ.ಚಂದ್ರಶೇಖರ್, ವಸಂತ್​ಕುಮಾರ್, ಸಂಜೀವ್​ಕುಮಾರ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದರು.

    ಸತತ 3 ಗಂಟೆ ಮರಣೋತ್ತರ ಪರೀಕ್ಷೆ: ಬೆಳಗ್ಗೆ 9.10ಕ್ಕೆ ಬಂದ ಪಾರ್ಥಿವ ಶರೀರವನ್ನು ಸಿಮ್್ಸ ಶವಗಾರಕ್ಕೆ ತರಲಾಯಿತು. ಸಿಮ್್ಸ ವಿಧಿ ವಿಜ್ಞಾನ ತಂಡದ ಮುಖ್ಯಸ್ಥರ ನೇತೃತ್ವದಲ್ಲಿ ಡಾ. ವೀರೇಶ್ ಸೇರಿ ಸಿಮ್ಸ್​ನ ಇಬ್ಬರು ಮತ್ತು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯರೊಬ್ಬರು ಮರಣೋತ್ತರ ಪರೀಕ್ಷೆ ನಡೆಸಿದರು. ಮಧ್ಯಾಹ್ನ 12.30ರ ವೇಳೆ ಮರಣೋತ್ತರ ಪರೀಕ್ಷೆ ಮುಗಿಯಿತು. ಪರೀಕ್ಷೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಯಿತು.

    ಗಣ್ಯರ ಅಂತಿಮ ನಮನ: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್​ಸಿ ಎಸ್.ರುದ್ರೇಗೌಡ, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್್ಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕರ್ನಾಟಕ ಸಣ್ಣ ಕೈಗಾರಿಕೆ ನಿಗಮದ ನಿರ್ದೇಶಕ ಎಸ್.ದತ್ತಾತ್ರಿ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಬಿಜೆಪಿ ಮುಖಂಡ ಮದನ್ ಗೋಪಾಲ್ ಮೃತರ ಅಂತಿಮ ದರ್ಶನ ಪಡೆದರು.

    ಅದಕ್ಕೂ ಮೊದಲು ಎಂಎಲ್​ಸಿ ಆರ್.ಪ್ರಸನ್ನಕುಮಾರ್, ಮಾಜಿ ಎಂಎಲ್​ಸಿ ಆರ್.ಕೆ.ಸಿದ್ದರಾಮಣ್ಣ, ಜಿಪಂ ಸದಸ್ಯ ಕಲಗೋಡು ರತ್ನಾಕರ್, ಕಾರ್ಪೆರೇಟರ್​ಗಳಾದ ಎಚ್.ಸಿ.ಯೋಗೀಶ್, ರಮೇಶ್ ಹೆಗ್ಡೆ, ನಾಗರಾಜ್ ಕಂಕಾರಿ ಮತ್ತಿತರರು ಶವಗಾರಕ್ಕೆ ಭೇಟಿ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts