More

    ವಿಧಾನಸೌಧ ಮುಂದೆ ಬಸವೇಶ್ವರ, ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಕೊನೆಗೂ ಕೂಡಿ ಬಂತು ಕಾಲ

    ಬೆಂಗಳೂರು: ವಿಧಾನಸೌಧ ಮಹಾದ್ವಾರದ ಮುಂದೆ ಸಾಮಾಜಿಕ ಕ್ರಾಂತಿ ಪುರುಷ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಕೊನೆಗೂ ಕಾಲ ಕೂಡಿ ಬಂದಿದೆ.

    ಮಹಾಪುರುಷರಿಬ್ಬರ ಅಶ್ವಾರೋಹಿ ಪುತ್ಥಳಿ ಸ್ಥಾಪನೆಗೆ ಶುಕ್ರವಾರ ಬೆಳಗ್ಗೆ 9ಕ್ಕೆ ಭೂಮಿಪೂಜೆ ಕಾರ್ಯಕ್ರಮ ನಿಗದಿಯಾಗಿದೆ. ತುಮಕೂರು ಸಿದ್ದಗಂಗಾ, ಆದಿಚುಂಚನಗಿರಿ, ಒಕ್ಕಲಿಗ ಮಹಾ ಸಂಸ್ಥಾನ, ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ, ನಂಜಾವದೂತ ಮಹಾಸ್ವಾಮೀಜಿಗಳು ಸಾನ್ನಿಧ್ಯವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಸಚಿವರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಪುತ್ಥಳಿ ಸ್ಥಾಪನೆ ಸಮಿತಿ ಅಧ್ಯಕ್ಷ, ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

    ವಿಧಾನಸೌಧ ಬಳಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಎರಡೂ ಕಂಚಿನ ಪ್ರತಿಮೆಗಳಾಗಿದ್ದು, ತಲಾ 24 ಅಡಿಗಳ ಎತ್ತರವಿದೆ. ಒಟ್ಟು ಎಂಟು ಕೋಟಿ ರೂ. ಅಂದಾಜು ವೆಚ್ಚಕ್ಕೆ ಸಿಎಂ ಬೊಮ್ಮಾಯಿ‌ ಒಪ್ಪಿಗೆ ನೀಡಿದ್ದು, ಈಗಾಗಲೇ ಪುತ್ಥಳಿ ಕೆತ್ತನೆ ಕಾರ್ಯ ಪ್ರಗತಿಯಲ್ಲಿದೆ. ಒಂದೂವರೆ ತಿಂಗಳಲ್ಲಿ ಮಹಾ ಪುರುಷರು ಪುತ್ಥಳಿ ಲೋಕಾರ್ಪಣೆಯಾಗಲಿವೆ ಎಂದು ಹೇಳಿದರು.

    ರಸ್ತೆಯಲ್ಲಿ ಸಿಕ್ಕ ಮದ್ಯ ಸೇವಿಸಿದ ಮೂವರು ಯುವಕರು: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆ! ಸಾವಿನ ಸುತ್ತ ಅನುಮಾನದ ಹುತ್ತ…

    ಡಿ.ಕೆ. ಶಿವಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ ಸಂಸದೆ ಸುಮಲತಾ ಅಂಬರೀಷ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts