More

    ವಿಧಾನಪರಿಷತ್ ಚುನಾವಣೆ ಸೆಮಿಫೈನಲ್ ಇದ್ದಂತೆ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

    ಬಾಗೇಪಲ್ಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅಭ್ಯರ್ಥಿಗಳಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದಿದ್ದಾರೆ.

    ಬಾಗೇಪಲ್ಲಿ ತಾಲೂಕಿನ ಬಿಳ್ಳೂರು ಗ್ರಾಮದ ಸ್ತಂಭ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಯುದ್ಧ ಗೆಲ್ಲಬೇಕಾದರೆ ಪೂರ್ವಭಾವಿಯಾಗಿ ಸಕಲ ಸಿದ್ಧತೆ ವಾಡಕೊಳ್ಳಬೇಕಿದ್ದು, ವಿಧಾನ ಪರಿಷತ್ ಚುನಾವಣೆ ನಮ್ಮ ಪಕ್ಷಕ್ಕೆ ಸೆಮಿಫೈನಲ್ ವ್ಯಾಚ್ ಇದ್ದಂತೆ. ಇದನ್ನು ಗೆದ್ದರೆ ವಿಧಾನಸಭೆ ಚುನಾವಣೆಯ ಫೈನಲ್ನಲ್ಲಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದರು.

    ಮೇಲ್ಮನೆಗೆ ಬುದ್ಧಿವಂತರನ್ನು ಆಯ್ಕೆ ವಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಭಾರತದ ಕನಸಿಗೆ ಶಕ್ತಿ ನೀಡಿದಂತಾಗುತ್ತದೆ. ಈ ಹಿಂದೆ ಸಿನಿವಾ ನಿರ್ವಾಪಕರೊಬ್ಬರನ್ನು ಗೆಲ್ಲಿಸಿ ತಪ್ಪು ವಾಡಿದ್ದೀರಾ, ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಂತರ ಕ್ಷೇತ್ರದತ್ತ ತಿರುಗಿಯೂ ನೋಡಿಲ್ಲ. ಏನೋ ಉದ್ಧಾರಮಾಡುತ್ತೇನೆಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಸಿ.ಆರ್.ಮನೋಹರ್ ವಿರುದ್ಧ ಕೆಂಡಾಮಂಡಲರಾದರು.

    ಸವಾಜದ ಬಗ್ಗೆ ಕಳಕಳಿ ಹೊಂದಿರುವ, ಬಡ ಜನರ ಬಗ್ಗೆ ಕಾಳಜಿಯುಳ್ಳ ವ್ಯಕ್ತಿಗೆ ಈ ಬಾರಿಯ ಚುನಾವಣೆಯಲ್ಲಿ ಅಯ್ಕೆ ಮಾಡಿಕೊಳ್ಳಬೇಕಾಗಿದೆ ಎಂದರು. ಗೆಲುವು ಮತ್ತು ಸೋಲನ್ನು ಸವಾನವಾಗಿ ಸ್ವೀಕರಿಸೋಣ. ಆದರೆ, ಈ ಕ್ಷೇತ್ರದ ಶಾಸಕರನ್ನು ಸೆಡ್ಡು ಹೊಡೆದು ನಿಲ್ಲಲು ಕಾರ್ಯಕರ್ತರು ಸನ್ನದ್ಧರಾಗಬೇಕಿದೆೆ. ಇಲ್ಲಿ ನಡೆಯುತ್ತಿರುವ ದಬ್ಬಾಳಿಕೆ ಮತ್ತು ದೌರ್ಜನ್ಯಗಳನ್ನು ತಡೆಯಬೇಕಿದೆ. ಮತದಾರರು ಮನಸ್ಸು ಮಾಡಿದರೆ ನಿಮ್ಮ ಜತೆಯಲ್ಲಿ ನಾವಿರುತ್ತೇವೆಂದು ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಭರವಸೆ ನೀಡಿದರು.

    ರಸ್ತೆಗಳ ಅಭಿವೃದ್ಧಿಗೆ ಕ್ರಮ: ರಾಜ್ಯದ ಅತ್ಯಂತ ಹಿಂದುಳಿದ ಕ್ಷೇತ್ರಗಳಲ್ಲಿಯೂ ರಸ್ತೆಗಳು ಉತ್ತಮವಾಗಿವೆ. ಆದರೇ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿರುವ ರಸ್ತೆಗಳನ್ನು ರಾಜ್ಯದ ಯಾವ ಭಾಗದಲ್ಲ್ಲಿಯೂ ನೋಡಲು ಸಾಧ್ಯವಿಲ್ಲ. ಈ ಭಾಗದ ಶಾಸಕರು ಭಾಷಣಗಳಲ್ಲಿ ಬೀಗುವುದು ಬಿಟ್ಟು ಅಭಿವೃದ್ಧಿಯನ್ನು ಕಾರ್ಯರೂಪಕ್ಕೆ ತರಬೇಕು ಎಂದರು. ಪೆರೆಸಂದ್ರ-ಬಿಳ್ಳೂರು ಮಾರ್ಗದ ರಸ್ತೆಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಈ ಭಾಗದ ನಾಗರಿಕರು ಅರ್ಜಿ ಸಲ್ಲಿಸಿದ್ದು, ವಿಶೇಷ ಕಾರ್ಯಕ್ರಮಗಳೊಂದಿಗೆ ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದು ಡಾ.ಸುಧಾಕರ್ ಭರವಸೆ ನೀಡಿದರು.

    ಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ವೆಂಕಟಶಿವಾರೆಡ್ಡಿ, ಮಂಡಲಾಧ್ಯಕ್ಷ ಆರ್.ಪ್ರತಾಪ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ವೆಂಕಟೇಶ್, ಮುಖಂಡರಾದ ಗ್ಯಾಸ್ ಶ್ರೀನಿವಾಸರೆಡ್ಡಿ, ಜಿ.ವಿ.ಕೃಷ್ಣಾರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts