ವಿದ್ವತ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

vidwath
ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಮಹಿತಾ ಕುಮಾರಿ ಅವರನ್ನು ಗೌರವಿಸಲಾಯಿತು.
Published on

ಬೆಳ್ತಂಗಡಿ: ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ ನಡೆಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ ಪಿಯುಸಿಯ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಕ್ರಿಕೆಟ್ ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಮಹಿತಾ ಕುಮಾರಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅನುಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕೋಶಾಧಿಕಾರಿ ಎಂ.ಕೆ.ಕಾಶಿನಾಥ್ ಭಟ್, ಸಲಹೆಗಾರ ರಾಧಾಕೃಷ್ಣ ರೈ, ಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ.ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲ ಡಾ.ಪ್ರಜ್ವಲ್ ಕಜೆ, ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net