ಕೊಕ್ಕರ್ಣೆ: ಬ್ರಹ್ಮಾವರ ಬಾರ್ಕೂರು ಲಯನ್ಸ್ ಕ್ಲಬ್ ವತಿಯಿಂದ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿಮಿತ್ರ ಪತ್ರಿಕೆ ನೀಡಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಂ ನಾಯಕ್, ಕಾರ್ಯದರ್ಶಿ ಐವನ್ ದೋನಾತ್ ಸುವಾರಿಸ್, ಸಂಸ್ಥೆ ನಿರ್ದೇಶಕರಾದ ಜಯರಾಂ ಶೆಟ್ಟಿ, ಬಾಲಕೃಷ್ಣ ಹೆಗ್ಡೆ, ಸದಸ್ಯರಾದ ಚೇತನ್‌ಕುಮಾರ್ ಶೆಟ್ಟಿ ಹಾಗೂ ಜಯಕರ ಹೆಗ್ಡೆ, ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ಕೆ.ಶೇಖರ ಹೆಗ್ಡೆ, ಪ್ರಾಂಶುಪಾಲ ಕೆ.ಚಂದ್ರಶೇಖರ್, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.