More

    ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ವಿದ್ಯಾರ್ಥಿ ಮಿತ್ರ’ ಸಹಕಾರಿ

    ಶಿಗ್ಗಾಂವಿ: ದಿನಪತ್ರಿಕೆಗಳು ಜ್ಞಾನದ ಭಂಡಾರವಿದ್ದಂತೆ. ‘ವಿಜಯವಾಣಿ’ ದಿನಪತ್ರಿಕೆಯು ವಿದ್ಯಾರ್ಥಿಗಳಿಗಾಗಿ ‘ವಿದ್ಯಾರ್ಥಿ-ಉದ್ಯೋಗ ಮಿತ್ರ’ ಎಂಬ ಜ್ಞಾನದ ಭಂಡಾರವನ್ನೇ ಹೊರತಂದಿದೆ. ವಿದ್ಯಾರ್ಥಿಗಳು ಪ್ರತಿದಿನವೂ ತಮ್ಮ ಅಭ್ಯಾಸದೊಂದಿಗೆ ವಿದ್ಯಾರ್ಥಿ ಮಿತ್ರ ಪತ್ರಿಕೆಯನ್ನು ಅಧ್ಯಯನ ಮಾಡಿದರೆ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರಿಯಾಗಲಿದೆ ಎಂದು ವಿಜಯಲಕ್ಷ್ಮಿ ಹೆಸರೂರ ಹೇಳಿದರು.

    ಪಟ್ಟಣದ ಶ್ರೀಮತಿ ಫಕೀರಮ್ಮ ಮಂತ್ರೋಡಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆಗಳನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗಂತೂ ವಿದ್ಯಾರ್ಥಿ ಮಿತ್ರ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ನಿತ್ಯವೂ ವಿದ್ಯಾರ್ಥಿ ಮಿತ್ರ ಪತ್ರಿಕೆಯನ್ನು ಓದುವ ಮೂಲಕ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

    ಶಾಲೆಯ ಮುಖ್ಯೋಪಾಧ್ಯಾಯ ಡಿ.ಪಿ. ಕರೂರ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿ ಮಿತ್ರ ಪತ್ರಿಕೆಯಲ್ಲಿ ಬರುವ ಮಾಹಿತಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

    ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಿತ್ರ ವಿತರಿಸಿದ ವಿಜಯಲಕ್ಷ್ಮಿ ಹೆಸರೂರ ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್. ಅಂಗಡಿ, ಯು.ಎನ್. ಮುದಿಗೌಡ್ರ, ಎಂ.ಸಿ. ಹಿರೇಮಠ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts