

ಉಡುಪಿ: ಭಾರತ ಆರ್ಥಿಕ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಜಪಾನ್ ಮೀರಿಸಿ ಇದೀಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಡಿಜಿಟಲ್ ಆರ್ಥಿಕತೆ ಬೆಳವಣಿಗೆ, ಬೃಹತ್ ಮೂಲಸೌಕರ್ಯ ಯೋಜನೆಗಳು ಮತ್ತು ಯುವಜನಸಂಖ್ಯೆ ಆರ್ಥಿಕಾಭಿವೃದ್ಧಿಯ ಇಂಧನಗಳಾಗಿವೆ ಎಂದು ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ ಹೇಳಿದರು.
ಅಜ್ಜರಕಾಡು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿಜಯವಾಣಿ ವಿದ್ಯಾರ್ಥಿಮಿತ್ರ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು. ಜಪಾನ್ ಮೂರು ದಶಕದಿಂದ ಸ್ಥಿರತೆಯ ಸಂಕಷ್ಟಗಳನ್ನು ಎದುರಿಸುತ್ತಿದ್ದು, ವೃದ್ಧಜನಸಂಖ್ಯೆ ಮತ್ತು ಕುಂಠಿತ ಗ್ರಾಹಕ ಖರ್ಚು ಆ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಭಾರತ ಈಗ ಅಮೇರಿಕ, ಚೀನಾ ಮತ್ತು ಜರ್ಮನಿಯ ನಂತರದ ಸ್ಥಾನದಲ್ಲಿದೆ. ಜರ್ಮನಿ ಮತ್ತು ಭಾರತಕ್ಕೆ ಹೆಚ್ಚಿನ ಅಂತರವಿಲ್ಲ. ಶ್ರೀದಲ್ಲೇ ಜರ್ಮನಿಯನ್ನು ಹಿಂದಿಕ್ಕಿ 3ನೇ ಆರ್ಥಿಕತೆಯಾಗುವುದರಲ್ಲಿ ಸಂಶಯವಿಲ್ಲ ಎಂದರು.
ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಲು ಸಿದ್ಧರಾಗಬೇಕು. ಈ ನಿಟ್ಟಿನಲ್ಲಿ ವಿಜಯವಾಣಿ ವಿದ್ಯಾರ್ಥಿಮಿತ್ರ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕೆ ಮಾರ್ಗದರ್ಶನ ನೀಡಲಿದೆೆ ಎಂದರು. ಮುಖ್ಯ ಶಿಕ್ಷಕಿ ಇಂದಿರಾ ಬಿ. ಉಪಸ್ಥಿತರಿದ್ದರು. ಹಿರಿಯ ವರದಿಗಾರ ಗೋಪಾಲಕೃಷ್ಣ ಪಾದೂರು ನಿರೂಪಿಸಿ, ಶಿಕ್ಷಕಿ ಜ್ಯೋತಿ ವಂದಿಸಿದರು. ಪ್ರಸರಣ ವಿಭಾಗದ ನವೀನ್ ನಾಯರಿ ಸಹಕರಿಸಿದರು.