22.5 C
Bengaluru
Sunday, January 19, 2020

ತಂಗಿಯನ್ನು ರಕ್ಷಿಸಿದ ಅಣ್ಣನಿಗೆ ಕೇಂದ್ರ ಸರ್ಕಾರದಿಂದ ಜೀವನ್ ರಕ್ಷಾ ಪದಕ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ರಿಪ್ಪನ್​ಪೇಟೆ: ತಂಗಿಯ ಜೀವ ಉಳಿಸಿದ ಹೊಸನಗರ ತಾಲೂಕು ಕಲ್ಲೂರು ಗ್ರಾಮದ ಯಾಲಕ್ಕಿಕೊಪ್ಪದ ಬಾಲಕ ಕೆ.ಯು.ನಿಶಾಂತ್ ಕೇಂದ್ರ ಸರ್ಕಾರ ನೀಡುವ ಜೀವನ್ ರಕ್ಷಾ ಪ್ರಶಸ್ತಿಗೆ ಪಾತ್ರನಾಗಿದ್ದಾನೆ.

ವಿಧಾನಸೌಧದ ಗೃಹಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ನಿಶಾಂತ್​ಗೆ 1 ಲಕ್ಷ ರೂ. ಮೊತ್ತದ ಚೆಕ್, ಜೀವನ್ ರಕ್ಷಾ ಪದಕ, ಪ್ರಶಸ್ತಿ ನೀಡಿ ಗೌರವಿಸಿದರು.

ಪ್ರಸ್ತುತ ಹೆದ್ದಾರಿಪುರದ ರಾಮಕೃಷ್ಣ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾಂತ್ ಶುಭಾ-ಉಮಾಕಾಂತ ದಂಪತಿ ಪುತ್ರ.

ಘಟನೆ ಹಿನ್ನೆಲೆ: ಈ ಘಟನೆ ನಡೆದಿದ್ದು 2015ರಲ್ಲಿ, ಆಗ ನಿಶಾಂತ್ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗಣೇಶ ಚತುರ್ಥಿಯಲ್ಲಿ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನು ಹೊಳೆಯಲ್ಲಿ ವಿಸರ್ಜನೆ ಮಾಡಿದ್ದನ್ನು ನೋಡಿದ್ದ ಮಕ್ಕಳು, ತಾವೂ ಗಣಪತಿ ತಯಾರಿಸಿ ತೋಟದಲ್ಲಿಯೇ ಪ್ರತಿಷ್ಠಾಪಿಸಿ ನೀರಿಗೆ ಬಿಡಲು ಮುಂದಾಗಿದ್ದರು. ನಿಶಾಂತ್​ನ 3 ವರ್ಷದ ತಂಗಿ ಎಂಟು ಅಡಿ ಅಳದ ಕೃಷಿಹೊಂಡಕ್ಕೆ ಬಿದ್ದಿದ್ದಳು. ಕೂಡಲೆ ನಿಶಾಂತ್ ಆಕೆ ಮುಳುಗದಂತೆ ತಲೆಕೂದಲನ್ನು ಹಿಡಿದು, ಸಹಾಯಕ್ಕಾಗಿ ಕೂಗಿದ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಜನರು ಇದನ್ನು ಕೇಳಿ ಅಲ್ಲಿಗೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದರು.

ಈ ವಿಷಯ ‘ವಿಜಯವಾಣಿ’ಯಲ್ಲಿ ಪ್ರಕಟವಾದ ಬಳಿಕ ಪೊಲೀಸ್ ಇಲಾಖೆ ಪ್ರಶಸ್ತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದೀಗ ಕೇಂದ್ರ ಸರ್ಕಾರ ನಿಶಾಂತ್​ಗೆ ಜೀವನ್ ರಕ್ಷಾ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯ ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ತಾಯಿ ಶುಭಾ, ಕಲ್ಲೂರು ನಾಗೇಂದ್ರಪ್ಪ ಇನ್ನಿತರರಿದ್ದರು

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...