ಅದ್ದೂರಿ ಶಾರದೋತ್ಸವಕ್ಕೆ ತೆರೆ

pancha
ಗಂಗೊಳ್ಳಿಯ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ಭವ್ಯ ಶೋಭಾಯಾತ್ರೆ ನಡೆಯಿತು. ಸತೀಶ್ ಜಿ, ನಿತಿನ್ ಖಾರ್ವಿ, ಶ್ರೀಧರ ಸಕ್ಲಾತಿ ಮೊದಲಾದವರಿದ್ದರು.
Published on

ಗಂಗೊಳ್ಳಿ:ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ನಡೆಯುತ್ತಿದ್ದ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಸೋಮವಾರ ಕೊನೆಗೊಂಡಿತು.

ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಕೇರಳದ ಆಕರ್ಷಕ ಚೆಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸಹಿತ ಹಲವು ವೇಷಗಳು ಗಮನ ಸೆಳೆದವು. ಬಳಿಕ ಪಂಚಗಂಗಾವಳಿ ನದಿಯಲ್ಲಿ ಶಾರದಾ ವಿಗ್ರಹದ ಜಲಸ್ತಂಭನ ಮಾಡಲಾಯಿತು. ಪಂಚಗಂಗಾವಳಿ ನದಿಗೆ ಸಾಮೂಹಿಕ ಪಂಚಗಂಗಾ ಆರತಿ ಕಾರ್ಯಕ್ರಮ ನಡೆಯಿತು.

ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಉಪನಿರೀಕ್ಷಕ ಹರೀಶ್ ಆರ್, ಬಸವರಾಜ್ ಕನಶೆಟ್ಟಿ ಹಾಗೂ ವಿವಿಧ ಠಾಣೆಯ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿತ್ತು. ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ, ಪ್ರ.ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಜಿ.ರಾಘವೇಂದ್ರ ಆಚಾರ್ಯ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಸುಜಾತಾ ಬಾಬು ಖಾರ್ವಿ ನೇತೃತ್ವದಲ್ಲಿ ಶೋಭಾಯಾತ್ರೆ ಸಂಪನ್ನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net