ಈ ಚಿತ್ರದಲ್ಲಿರೋದು ಒಂದೇ ಪಾತ್ರ; ‘ರಾಘು’ ಬಿಡುಗಡೆ ದಿನಾಂಕ ಫಿಕ್ಸ್​

blank

ಬೆಂಗಳೂರು: ವಿಜಯ್​ ರಾಘವೇಂದ್ರ ಅಭಿನಯದಲ್ಲಿ ‘ರಾಘು’ ಎಂಬ ಏಕಪಾತ್ರವಿರುವ ಚಿತ್ರ ಬರುತ್ತಿದೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಈಗ ಆ ಚಿತ್ರ ಸಂಪೂರ್ಣವಾಗಿರುವುದಷ್ಟೇ ಅಲ್ಲ, ಚಿತ್ರದ ಬಿಡುಗಡೆ ದಿನಾಂಕ ಸಹ ಫಿಕ್ಸ್​ ಆಗಿದೆ.

ಇದನ್ನೂ ಓದಿ: ನೈಜ ಘಟನೆಗಳನ್ನಾಧರಿಸಿದ ‘ನೋಡದ ಪುಟಗಳು’ ಚಿತ್ರದ ಟ್ರೇಲರ್​ ಬಿಡುಗಡೆ

ಹೌದು, ‘ರಾಘು’ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್​ ಆಗಿದ್ದು, ಏಪ್ರಿಲ್​ 28ಕ್ಕೆ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್​ನಡಿ ಈ ಚಿತ್ರವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ್ ಕೋಟ ನಿರ್ಮಾಣ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಿಜಯ್ ರಾಘವೇಂದ್ರ ನಟರಾಗಿ ಹಲವು ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಆ ಪೈಕಿ ‘ರಾಘು’ ಸಹ ಒಂದು. ಈ ಚಿತ್ರದಲ್ಲಿ ವಿಜಯ್​ ರಾಘವೇಂದ್ರ ಒಬ್ಬರೇ ಆರಂಭದಿಂದ ಕೊನೆಯವರೆಗೂ ಇರುತ್ತಾರೆ. ಇದೊಂದು ಥ್ರಿಲ್ಲರ್​ ಚಿತ್ರವಾಗಿದ್ದು, ಕಥೆಯೇನು ಎಂಬುದನ್ನು ಚಿತ್ರತಂಡ ರಹಸ್ಯವಾಗಿ ಇಟ್ಟಿದೆ.

ಇದನ್ನೂ ಓದಿ: ‘ಎಕ್ಸ್​​​ಕ್ಯೂಸ್​ ಮಿ ಕೇಳಿ ನನ್ನ ಲೆಕ್ಚರು …’; ‘ಜಸ್ಟ್​ ಪಾಸ್​’ ಚಿತ್ರಕ್ಕೆ ಶರಣ್​ ಹಾಡು

ಈ ಹಿಂದೆ ‘ಆನ’ ಹಾಗೂ ‘ಬ್ಯಾಂಗ್’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಆನಂದ್​ ರಾಜ್​ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಇರುವ ಈ ಚಿತ್ರದಲ್ಲಿ ಎರಡು ಹಾಡುಗಳಿದ್ದು, ವಾಸುಕಿ ವೈಭವ್ ಹಾಗೂ ಆಲ್​ ಓಕೆ ಹಾಡಿದ್ದಾರೆ.

25ನೇ ಸಿನಿಮಾ ರಿಲೀಸ್ ಶುಭ ಸಂದರ್ಭದಲ್ಲಿ 1 ಕೋಟಿ ರೂ. ಬೆಲೆಬಾಳುವ ಕಾರಿಗೆ ಒಡೆಯನಾದ ಡಾಲಿ!

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…