

Ahmedabad Plane Crash: ಇಂದು (ಜೂನ್ 12) ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಸಮಯದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ಭಸ್ಮವಾಗಿದೆ. ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ, ಅದು ದೃಢವಾಗಿದೆ.
ಏರ್ ಇಂಡಿಯಾ 171 ವಿಮಾನವಾಗಿ ಕಾರ್ಯನಿರ್ವಹಿಸುತ್ತಿರುವ ಬೋಯಿಂಗ್ 787-8 ಡ್ರೀಮ್‌ಲೈನರ್ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರನ್ನು ಹೊತ್ತೊಯ್ಯುತ್ತಿತ್ತು. ಈ ವಿಮಾನ ವೈದ್ಯಕೀಯ ಕಾಲೇಜಿಗೆ ಸೇರಿದ ಹಾಸ್ಟೆಲ್ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಬೆಂಕಿಗೆ ಆಹುತಿಯಾಗಿದೆ. ವಿಮಾನದಲ್ಲಿ ಎಷ್ಟು ಮಂದಿ ಮೃತರು ಎಂಬ ವರದಿ ಇನ್ನೂ ಲಭ್ಯವಾಗಿಲ್ಲ.
ಲಂಡನ್ನಲ್ಲಿರುವ ತಮ್ಮ ಪುತ್ರಿಯನ್ನು ಭೇಟಿಯಾಗುವ ಸಲುವಾಗಿ ವಿಜಯ್ ರೂಪಾನಿ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಇನ್ನಷ್ಟು ಅಧಿಕೃತ ಮಾಹಿತಿಗಳು ಶೀಘ್ರವೇ ಹೊರಬೀಳಲಿವೆ.
ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿ ಬರೋಬ್ಬರಿ 169 ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ವಿಮಾನ ದುರಂತದಲ್ಲಿ ಇಲ್ಲಿಯವರೆಗೆ ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎಂಬ ಅಧಿಕೃತ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.