More

    ಜನರ ಸಮಸ್ಯೆ ಪರಿಹಾರಕ್ಕೆ `ವಿಜಯ ಸ್ಪಂದನ’ ಆಪ್: ಎಂ.ಎಸ್.ದಿವಾಕರ

    ಹೊಸಪೇಟೆ: ತಕ್ಷಣ ಪರಿಹಾರಿಸಬಹುದಾದ ಜನ ಸಾಮಾನ್ಯರ ಸಮಸ್ಯೆಗಳನ್ನು ತಿಳಿಯಲು `ವಿಜಯ ಸ್ಪಂದನ’ ಮೊಬೈಲ್ ಆಪ್ ಜಾರಿಗೆ ತರಲಾಗುವುದು. ನೂತನ ಜಿಲ್ಲೆಯ ಅಭಿವೃದ್ಧಿ ಮತ್ತು ಸುಗಮ ಆಡಳಿತಕ್ಕಾಗಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳುಹಿಸಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುದು. ಜನರಿಗೆ ತೀರಾ ಅಗತ್ಯವಿರುವ ಆರೋಗ್ಯ ಮತ್ತು ಶೈಕ್ಷಣಿಕ ಸೌಲಭ್ಯಗಳನ್ನು ಹೆಚ್ಚಿಸಲು ಅಗತ್ಯ ಕ್ರಮ ವಹಿಸ ಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಭರವಸೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ವಿಜಯನಗರ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸುವುದು, ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕಿದೆ. ಅದಕ್ಕಾಗಿ ಮೇಲಿಂದ ಮೇಲೆ ವಿವಿಧ ಇಲಾಖೆಗಳ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ಮಾಡುವುದಾಗಿ ತಿಳಿಸಿದರು.

    ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳು ಯಾವುದೇ ರೀತಿಯಲ್ಲಿ ಖಾಸಗಿ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸಲು ಉದ್ದೇಶಿಸ ಲಾಗಿದೆ. ಅದರೊಂದಿಗೆ ಅಂಗನವಾಡಿಗಳನ್ನು ಸುಸಜ್ಜಿತಗೊಳಿಸಲು ಪ್ರಯತ್ನಿಸಲಾಗುವುದು. ಅದಕ್ಕಾಗಿ ಸ್ವಂತ ಕಟ್ಟಡ ಇಲ್ಲದ ಕೇಂದ್ರಗಳು, ಕೊಠಡಿಗಳ ಸಮಸ್ಯೆ ಎದುರಿಸುತ್ತಿರುವ ಶಾಲೆಗಳ ಬಗ್ಗೆ ಆಯಾ ಇಲಾಖೆಗಳಿಂದ ಮಾಹಿತಿ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಸಿಆರ್‌ಸಿಗಳ ಸಭೆ ನಡೆಸಿ, ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರವಾಗಿ ತಿಳಿಯಾಗುವುದು.

    ಅವುಗಳ ಪರಿಹಾರಕ್ಕಾಗಿ ಕೆಎಂಆರ್‌ಸಿ ನಿಧಿ, ಡಿಎಂಎಫ್ ಹಾಗೂ ಕೆಕೆಆರ್‌ಡಿಬಿ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು. ಜಿಲ್ಲಾಡಳಿತ ದೊಂದಿಗೆ ಅತ್ಯುತ್ತಮವಾಗ ಕೈಜೋಡಿಸಿ ಅತ್ಯುತ್ತಮವಾಗಿ ಸೇವೆ ನೀಡುವ ಸರ್ಕಾರಿ ಶಾಲೆ ಶಿಕ್ಷಕರು, ಹಾಸ್ಟೆಲ್ ವಾರ್ಡ್ನ್ ಅಥವಾ ಕುಕ್, ಅಂಗನವಾಡಿ ಮೇಲ್ವಿಚಾರಕರು, ಸಹಾಯಕರನ್ನು ಜಿಲ್ಲಾಡಳಿತ ಸನ್ಮಾನಿಸಲಾಗುವುದು ಎಂದು ವಿವರಿಸಿದರು.

    ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯವನಾದ ನಾನು ಈ ಭಾಗದ ಜನರ ಜೀವನ, ಬಡತನ, ಸಾಮಾಜಿಕ ಸಮಸ್ಯೆಗಳ ಅರಿವಿದೆ. ಬಡತನವನ್ನು ಅನುಭವಿಸದಿದ್ದರೂ, ತುತ್ತು ಅನ್ನಕ್ಕಾಗಿ ಪರದಾಡುವ ಜನರನ್ನು ಹತ್ತಿರದಿಂದ ನೋಡಿದ್ದೇನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳ ನ್ನು ಸುಸಜ್ಜಿತಗೊಳಿಸುವುದು ನನ್ನ ಮೊದಲ ಆದ್ಯತೆಯಾಗಿರಲಿದೆ. ಜಿಲ್ಲೆಯನ್ನು ಆಮೂಲಾಗ್ರ ಬದಲಾವಣೆ ಮಾಡುವ ಭ್ರಮೆಯಲ್ಲಿ ನಾನಿಲ್ಲ. ಜನರ ಬೇಕು- ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟ ಗುರಿಯಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts