More

   ಜೈಲಿನಲ್ಲಿರುವ ದರ್ಶನ್‌ ಭೇಟಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್

  ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿ ಇರುವ ನಟ ದರ್ಶನ್​ ಅವರನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಆಪ್ತರು ಬರುತ್ತಿದ್ದಾರೆ. ಇಂದು ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿನ ಬಳಿ ಬಂದಿದ್ದರು ಎನ್ನಲಾಗಿದೆ.

  ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬ ಸದಸ್ಯರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜೈಲಿಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಆಗಮಿಸಿದ್ದಾರೆ ಎನ್ನಲಾಗಿದೆ.

  ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರನ್ನು ಭೇಟಿಗೆ ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದ ಬ್ಯಾರಿಕೇಡ್‌ವರೆಗೂ ಆಗಮಿಸಿದ್ದ ವಿಜಯಲಕ್ಷ್ಮಿ ಅವರ ಕಾರು ದಿಢೀರನೇ ವಾಪಸ್ ತೆರಳಿತ್ತು. ಪರಪ್ಪನ ಅಗ್ರಹಾರದ ಬಳಿ ವಿಜಯಲಕ್ಷ್ಮಿ ಅವರಿಗೆ ಸೇರಿದ KA-05, NB-6633 ನಂಬರಿನ ಕಾರು ಆಗಮಿಸಿತ್ತು. ಪೊಲೀಸರ ಬ್ಯಾರಿಕೇಡ್ ಬಳಿ ಬರುತ್ತಿದ್ದಂತೆ ಮಾಧ್ಯಮದವರನ್ನು ನೋಡಿರುವ ವಿಜಯಲಕ್ಷ್ಮಿ ಅವರ ಕಾರು ವಾಪಸ್ ಹೋಗಿತ್ತು.

  ಕಾರು ಬದಲಿಸಿಕೊಂಡು ದರ್ಶನ್ ಅವರ ಪತ್ನಿಯನ್ನು ಪೊಲೀಸರು ಜೈಲಿನ ಒಳಗೆ ಕರೆದುಕೊಂಡು ಹೋಗಿದ್ದಾರೆ. ಕಿಯಾ ಕಾರನ್ನು ಬದಲಿಸಿಕೊಂಡು ಬೊಲೆನೋ ಕಾರಿನಲ್ಲಿ ಮಾಧ್ಯಮಗಳ ಕಣ್ತಪ್ಪಿಸಿ ಪೊಲೀಸರು ಜೈಲಿನ ಒಳಗೆ ಕರೆದುಕೊಂಡು ಹೋಗಿದ್ದಾರೆ.

  ಕೊಲೆ ಕೇಸ್‌ನಲ್ಲಿ ದರ್ಶನ್ ಬಂಧನವಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ಕೊಟ್ಟು ಪೊಲೀಸರ ವಿಚಾರಣೆ ಎದುರಿಸಿದ್ದರು. ಇದಾದ ಬಳಿಕ ವಿಜಯಲಕ್ಷ್ಮಿ ಅವರು ದರ್ಶನ್ ಅವರ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

  See also  VIDEO| ಬಾಲಮಂದಿರದಿಂದ ಬಾಲಕಿಯರು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts