ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murdercase)ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡುವ ಮೂಲಕ ಬಿಗ್ ರಿಲೀಫ್ ನೀಡಿದ್ದು, ಈ ಬಗ್ಗೆ ಖ್ಯಾತ ನಟ, ನಟಿಯರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಟ ದರ್ಶನ್ಗೆ ಜಾಮೀನು ಮಂಜೂರು ಆಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ (Vijayalakshmi) ಸಾಮಾಜಿಕ ಜಾಲತಾಣದಲ್ಲಿ ಕೈಯಲ್ಲಿ ಹೂವನ್ನು ಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ದೇವರಿಗೆ ಧನ್ಯವಾದವನ್ನು ಅರ್ಪಿಸಿದ್ದು, ಈ ಪೋಸ್ಟ್ ಸಖತ್ ವೈರಲ್ ಆಗಿದೆ. ಇದಲ್ಲದೆ ನಟ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟಿ ಸೋನಲ್ ಕೂಡ ಸ್ಟೋರಿಯಲ್ಲಿ ಎಮೋಜಿ ಪೋಸ್ಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ದಿನದಿಂದಲೂ ಪತಿಯನ್ನು ಹೊರಗೆ ಕರೆತರಲು ಇನ್ನಿಲ್ಲದ ಕಸರತ್ತು ಮಾಡಿದ ವಿಜಯಲಕ್ಷ್ಮೀ (Vijayalakshmi)15ಕ್ಕೂ ಹೆಚ್ಚು ದೇವಸ್ಥಾನಗಳನ್ನು ಸುತ್ತಿ ವಿಶೇಷ ಪೂಜೆ ಮಾಡಿಸಿದ್ದರು. ಹಿಂದೆ ನಡೆದಿದ್ದನ್ನು ಯೋಚಿಸದೆ ಪತಿಯನ್ನು ಬಿಡುಗಡೆ ಮಾಡಿಸಲು ವಿಜಯಲಕ್ಷ್ಮೀ ಪಟ್ಟ ಪಾಡು ಶ್ಲಾಘನೀಯವಾಗಿದ್ದು, ಅನೇಕರು ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ಆರೋಪಿಗಳಿಗೆ ಜಾಮೀನು ದೊರೆತರು ಸಂಕಷ್ಟ ತಪ್ಪಿಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.
ದರ್ಶನ್ & ಗ್ಯಾಂಗ್ಗೆ ಜಾಮೀನು ಮಂಜೂರು; Renukaswamy ತಂದೆ ಹೇಳಿದ್ದಿಷ್ಟು