More

    ನಿರೀಕ್ಷೆ ಹೆಚ್ಚಿಸುತ್ತಿರುವ ‘ವಿಜಯಾನಂದ’ ಚಿತ್ರ; ಡಾ. ವಿಜಯ ಸಂಕೇಶ್ವರ ಪಾತ್ರದಲ್ಲಿ ನಿಹಾಲ್- ಕ್ಯಾರೆಕ್ಟರ್ ಇಂಟ್ರೋ ರಿಲೀಸ್

    ಬೆಂಗಳೂರು: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಜೀವನಾಧರಿತ ಸಿನಿಮಾ ‘ವಿಜಯಾನಂದ’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಪ್ರಮುಖವಾದುದು. ವಿಆರ್​ಎಲ್ ಫಿಲ್ಮ್​ ಪ್ರೊಡಕ್ಷನ್ಸ್​ ಬ್ಯಾನರ್​ನಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ‘ವಿಜಯಾನಂದ’ ಈಗಾಗಲೇ ಕುತೂಹಲ ಮೂಡಿಸಿರುವುದಲ್ಲದೆ ನಿರೀಕ್ಷೆಯನ್ನೂ ಹೆಚ್ಚಿಸಿದೆ.

    ಬಹುಭಾಷೆಗಳಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ‘ವಿಜಯಾನಂದ’ ಚಿತ್ರವನ್ನು ‘ಟ್ರಂಕ್​’ ಖ್ಯಾತಿಯ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ.ವಿಜಯ ಸಂಕೇಶ್ವರರ ಪಾತ್ರದಲ್ಲಿ ನಟ ನಿಹಾಲ್​, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್​, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್​ ನಾಗ್​ ಅಭಿನಯಿಸುತ್ತಿದ್ದಾರೆ.

    ಡಾ.ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್​ ನಟಿಸುತ್ತಿದ್ದು, ಬುಧವಾರ ನಿಹಾಲ್​​ ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರವನ್ನು ಪರಿಚಯಿಸುವ ಕ್ಯಾರೆಕ್ಟರ್ ಇಂಟ್ರೊ​ ಬಿಡುಗಡೆ ಮಾಡಲಾಗಿದೆ. ಡಾ. ವಿಜಯ ಸಂಕೇಶ್ವರರ ಅಪರೂಪದ ಫೋಟೋಗಳನ್ನು ಒಳಗೊಂಡಿರುವ ಕ್ಯಾರೆಕ್ಟರ್ ಇಂಟ್ರೊ ಇಂದು ಬಿಡುಗಡೆ ಮಾಡಲಾಗಿದ್ದು, ಉತ್ತಮ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ.

    ಈಗಾಗಲೇ “ವಿಜಯಾನಂದ’ ಚಿತ್ರದ ಟೀಸರ್ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಆನಂದ್​ ಆಡಿಯೋ ಯೂಟ್ಯೂಬ್​ ಚಾನಲ್​ನಲ್ಲಿ ಬಿಡುಗಡೆಯಾಗಿದ್ದು, 2 ಕೋಟಿ 15 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೊಂಡಿದೆ.

    ನಿರೀಕ್ಷೆ ಗರಿಗೆದರಿಸುತ್ತಿರುವ ‘ವಿಜಯಾನಂದ’ ಚಿತ್ರ; ಡಾ.ಆನಂದ ಸಂಕೇಶ್ವರ ಪಾತ್ರದಲ್ಲಿ ಭರತ್ ಬೋಪಣ್ಣ- ಕ್ಯಾರೆಕ್ಟರ್ ಇಂಟ್ರೋ ರಿಲೀಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts