More

    ವಿದೇಶದಲ್ಲೂ ಜೋರಾಗಿದೆ ‘ವಿಜಯಾನಂದ’ ಚಿತ್ರದ ಹವಾ!

    ಬೆಂಗಳೂರು: ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ವಿಜಯಾನಂದ’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಡಿ.9ರಂದು ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ.

    ಇದನ್ನೂ ಓದಿ: 14 ವರ್ಷಗಳ ನಂತರ ಜತೆಯಾಗಿ ನಟಿಸುತ್ತಿದ್ದಾರೆ ವಿಜಯ್​-ತ್ರಿಷಾ!

    ಡಾ. ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ತಯಾರಾಗಿರುವ ‘ವಿಜಯಾನಂದ’, ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದು ವಿಶೇಷ. ಭಾರತದಲ್ಲೇ ಒಂದು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ವಿಜಯಾನಂದ’ ಬಿಡುಗಡೆಯಾಗುತ್ತಿದ್ದು, ಭಾರತವಲ್ಲದೆ ಅಮೆರಿಕಾ, ಇಂಗ್ಲೆಂಡ್​, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮುಂತಾದ ಕಡೆಗಳಲ್ಲೂ ನೂರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

    ಈ ಪೈಕಿ ಇಂಗ್ಲೆಂಡ್​ನಲ್ಲಿ ‘ವಿಜಯಾದನಂದ’ ಚಿತ್ರದ ಕನ್ನಡ ಮತ್ತು ತೆಲುಗು ಚಿತ್ರದ ಅವತರಣಿಕೆಗಳು ಬಿಡುಗಡೆಯಾದರೆ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಲ್ಲಿ ಕನ್ನಡ ಅವತರಣಿಕೆ ಬಿಡುಗಡೆಯಾಗುತ್ತಿದೆ.
    ‘ವಿಜಯಾನಂದ’ ಚಿತ್ರವು 1976ರಲ್ಲಿ ಒಂದು ಟ್ರಕ್​ನಿಂದ ಪ್ರಾರಂಭವಾಗಿ ಇಂದು ಭಾರತದ ಅತಿ ದೊಡ್ಡ ಲಾಜಿಸ್ಟಿಕ್ಸ್​ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್​ಲ್​ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರ ಅದ್ಭುತ ಮತ್ತು ರೋಮಾಂಚನಕಾರಿ ಕಥೆಯಾಗಿದೆ. ಈ ಕಥೆಯು ವಿಜಯ ಸಂಕೇಶ್ವರ ಮತ್ತು ಅವರ ಮಗ ಡಾ. ಆನಂದ ಸಂಕೇಶ್ವರ ಅವರ ಯಶಸ್ಸಿನ ಪ್ರಯಾಣವನ್ನು ಒಳಗೊಂಡಿದೆ.

    ಇದನ್ನೂ ಓದಿ: ತುಳುನಾಡ ದೈವ ‘ಕೊರಗಜ್ಜ’ ಕುರಿತಾದ ಚಿತ್ರದಲ್ಲಿ ಕಬೀರ್ ಬೇಡಿ …

    ವಿಆರ್​ಎಲ್​ ಪ್ರೊಡಕ್ಷನ್ಸ್​ನಡಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ನಿಹಾಲ್ ರಜಪೂತ್​​, ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್​ ನಾಗ್​, ರವಿಚಂದ್ರನ್​, ವಿನಯಾ ಪ್ರಸಾದ್​, ಸಿರಿ ಪ್ರಹ್ಲಾದ್​, ಪ್ರಕಾಶ್​ ಬೆಳವಾಡಿ, ಭರತ್​ ಬೋಪಣ್ಣ ಮುಂತಾದವರು ನಟಿಸಿದ್ದಾರೆ. ರಿಷಿಕಾ ಶರ್ಮ ಚಿತ್ರಕಥೆ ರಚಿಸುವುದರ ಜತೆಗೆ ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ಸಂಗೀರ ನಿರ್ದೇಶಕರಾದ ಗೋಪಿ ಸುಂದರ್​ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

    ಛತ್ರಪತಿ ಶಿವಾಜಿಯಾಗಿ ಅಕ್ಷಯ್​ ಕುಮಾರ್​ ಹೀಗೆ ಕಾಣ್ತಾರೆ ನೋಡಿ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts