More

    ಹೆತ್ತ ತಂದೆ-ತಾಯಿಗೆ ಹೊರೆಯಾಗದಿರಿ

    ವಿಜಯಪುರ: ನೂರಾರು ದೇವರಿಗೆ ಹರಕೆ ಹೊತ್ತು ಹೆತ್ತ ತಂದೆ ತಾಯಿಗೆ ಹೊರೆಯಾಗದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾಸ್ಪತ್ರೆ ಆಪ್ತ ಸಮಾಲೋಚಕ ರವಿ ಕಿತ್ತೂರ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
    ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2020-21ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ತಂದೆ-ತಾಯಿ ತಮ್ಮ ಮಕ್ಕಳ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ. ಅವರ ಪ್ರಯತ್ನಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಳ್ಳಬೇಕೆಂದರು.
    ಪಿಎಸ್‌ಐ ಪ್ರೇಮಾ ಕುಚಬಾಳ ಮಾತನಾಡಿ, ಸದೃಢವಾದ ರಾಷ್ಟ್ರ ಮತ್ತು ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಶ್ರಮ ವಹಿಸಿ ಸಾಧನೆ ಮಾಡಲು ತಿಳಿಸಿದರು.
    ಪ್ರಾಂಶುಪಾಲ ಪ್ರೊ.ಎಸ್.ಎಸ್. ರಾಜಮಾನ್ಯ ಅಧ್ಯಕ್ಷತೆ ವಹಿಸಿದ್ದರು. ಡಾ.ಎ.ಐ. ಹಂಜಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ಎ.ಎ. ಮುಲ್ಲಾ, ಪ್ರೊ.ಎ.ಟಿ. ಮುದಕಣ್ಣವರ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು. ಪ್ರೊ.ಐ.ಎಸ್. ಮಠಪತಿ ನಿರೂಪಿಸಿದರು. ಪ್ರೊ.ಸುನೀಲ ತೊಂಟಾಪೂರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts