More

    ಬಿತ್ತನೆ ಬೀಜ, ಗೊಬ್ಬರ ಬೆಲೆ ನಿಯಂತ್ರಿಸಿ

    ವಿಜಯಪುರ: ಬಿತ್ತನೆ ಬೀಜ, ಗೊಬ್ಬರ ಬೆಲೆ ನಿಯಂತ್ರಿಸುವುದು ಹಾಗೂ ಗೊಬ್ಬರ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಸಲ್ಲಿಸಿದರು.

    ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಬಿತ್ತನೆ ಬೀಜ ಹಾಗೂ ಗೊಬ್ಬರ ಬೆಲೆ ಗಗನಕ್ಕೇರಿದೆ. ಪ್ರತಿ ಚೀಲ ಡಿಎಪಿ ಗೆ 1800 ರೂ.ನಂತೆ, ಯೂರಿಯಾ ಗೊಬ್ಬರ ಪ್ರತಿ ಪಾಕೇಟ್‌ಗೆ 266ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿಪಡಿಸಿದ ದರಕ್ಕೆ ಮಾರಾಟ ಮಾಡಿದರೆ ರೈತರಿಗೆ ಹೊರೆ ಆಗುತ್ತದೆ. ಅಂಥದ್ದರಲ್ಲಿ ಗೊಬ್ಬರದ ಅಂಗಡಿಯವರು ತಮ್ಮ ಮನಸ್ಸಿಗೆ ಬಂದಂತೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ 150 ರೂಪಾಯಿಯಿಂದ 200 ರೂಪಾಯಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಾರೆ. ಮೊದಲೇ ರೈತರು ಸರಿಯಾಗಿ ಮಳೆ ಇಲ್ಲದೆ ಬರಗಾಲದಿಂದ ತತ್ತರಿಸಿದ್ದಾರೆ. ಸರ್ಕಾರ ಬಿತ್ತನೆ ಬೀಜ ಗೊಬ್ಬರ ಹೆಚ್ಚಿಗೆ ಮಾಡಿದ ರೀತಿ ರೈತರು ಬೆಳೆದಂಥ ಎಲ್ಲ ಬೆಳಗಳಿಗೆ ರೈತರ ಶ್ರಮಕ್ಕೆ ತಕ್ಕ ಬೆಲೆ ಕೊಟ್ಟಾಗ ಮಾತ್ರ ರೈತರು ಸಾಲಗಾರರಾಗುವುದಿಲ್ಲ ಎಂದರು.

    ಜಮೀನಿನಲ್ಲಿ ಬಿತ್ತನೆ ಮಾಡುವ ಸಂದರ್ಭದಿಂದ ಹಿಡಿದು ಬೆಳೆ ಕಟಾವು ಮಾಡುವರೆಗೂ ಕೃಷಿಗೆ ತಗಲುವ ಎಲ್ಲ ಖರ್ಚು ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ಬೆಲೆ ನಿಗದಿಪಡಿಸಬೇಕು. ಈ ಹಿಂದೆ ಡಾ.ಎಂ.ಎಸ್.ಸ್ವಾಮಿನಾಥನ್ ಅವರು ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಸರ್ಕಾರಕ್ಕೆ ವರದಿ ನೀಡಿದ್ದರು. ಆದರೆ ಇಲ್ಲಿವರೆಗೂ ಸರ್ಕಾರ ಸ್ವಾಮಿನಾಥನ್ ವರದಿ ಜಾರಿಗೆ ಹಿಂದೇಟು ಹಾಕುತ್ತಿದೆ. ಸ್ವಾಮಿನಾಥನ್ ವರದಿ ಶೀಘ್ರ ಜಾರಿಗೆ ತರಬೇಕು. ಇಲ್ಲದಿದ್ದರೆ ಅಖಂಡ ಕರ್ನಾಟಕ ರೈತ ಸಂಘ ಉಗ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

    ಬಸವನಬಾಗೇವಾಡಿ ತಾಲೂಕು ಉಪಾಧ್ಯಕ್ಷ ಹೊನಕೇರಪ್ಪ ತೆಲಗಿ ಮಾತನಾಡಿ, ರೈತ ಕುಲ ಉಳಿವಿಗಾಗಿ ಸ್ವಾಮಿನಾಥನ್ ಸಲ್ಲಿಸಿದ ವರದಿಯನ್ನು ಸರ್ಕಾರ ಜಾರಿಗೆ ತಂದರೆ ರೈತರ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಾಗುತ್ತದೆ. ಆದ್ದರಿಂದ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ದರ ಪಟ್ಟಿಯನ್ನು ಪ್ರತಿಗೊಬ್ಬರ ಅಂಗಡಿ ಮುಂದೆ ಹಾಕಬೇಕು ಎಂದು ಆಗ್ರಹಿಸಿದರು.

    ಬಾಲಪ್ಪಗೌಡ ಲಿಂಗದಳ್ಳಿ, ಸಂಗನಗೌಡ ಕೊಳೂರ, ಶೇಖಪ್ಪ ಕರಾಬಿ, ಬಾಲಪ್ಪಗೌಡ ಲಿಂಗದಳ್ಳಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts