ಉಗ್ರರ ಅಟ್ಟಹಾಸ ಅಡಗಿಸಲು ಆಗ್ರಹ

Latest News

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ಬಾಲ್ಯದ ಜೀವನವೇ ಚೆಂದ

ಮಂಡ್ಯ: ಯಾವುದೇ ರೀತಿಯ ಒತ್ತಡವಿಲ್ಲದೆ, ಮುಕ್ತವಾಗಿ ಆಲೋಚಿಸುವ ಬಾಲ್ಯದ ಜೀವನವೇ ಚೆಂದ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು. ನಗರದ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಜಯಪುರ: ಕಾಶ್ಮೀರದ ಪುಲ್ವಾಮಾದಲ್ಲಿ ವೀರಯೋಧರ ಮೇಲೆ ದಾಳಿ ನಡೆಸಿದ ದುಷ್ಕೃತ್ಯವೆಸಗಿದ ಉಗ್ರರ ಮೇಲೆ ಉಗ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರದ ಗಾಂಧಿಚೌಕ್‌ನಲ್ಲಿ ನ್ಯಾಯವಾದಿಗಳು ಬೃಹತ್ ಬೈಕ್ ರ‌್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ನೂರಾರು ನ್ಯಾಯವಾದಿಗಳು ಉಗ್ರಗಾಮಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಜರಾಳಿ ಮಾತನಾಡಿ, ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಘಟನೆ ಅತ್ಯಂತ ನೋವು ತಂದಿದೆ. ದೇಶದ ರಕ್ಷಣೆಯ ಕಾಯಕ ಜೀವಿಗಳನ್ನು ಕೊಂದಿರುವ ಉಗ್ರರಿಗೆ ಮನುಷ್ಯತ್ವವೆಂಬುದೇ ಇಲ್ಲ. ಭಯ, ದ್ವೇಷ ಮೂಡಿಸುವ ದೃಷ್ಟಿಯಿಂದ ಅಮಾಯಕರ ಪ್ರಾಣವನ್ನು ಬಲಿ ತೆಗೆದುಕೊಳ್ಳುತ್ತಿರುವ ಉಗ್ರಗಾಮಿಗಳು ಕೂಡಲೇ ನಿರ್ನಾಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ಸಂಕಲ್ಪವನ್ನು ಮಾಡಬೇಕಿದೆ ಎಂದು ಒತ್ತಾಯಿಸಿದರು.

ಉಗ್ರಗಾಮಿಗಳ ಅಟ್ಟಹಾಸವನ್ನು ಸಂಪೂರ್ಣ ಮಟ್ಟ ಹಾಕಿ ದೇಶದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಬೇಕಿದೆ. ನೂರಾರು ಅಮೂಲ್ಯ ಸೈನಿಕ ಜೀವಗಳ ಬಲಿದಾನ ವ್ಯರ್ಥವಾಗಬಾರದು, ಉಗ್ರರಿಗೆ ತಕ್ಕ ಪಾಠ ಕಲಿಸಬೇಕಾಗಿದೆ, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಉಗ್ರಗಾಮಿಗಳ ನೆಲೆಯನ್ನು ಧ್ವಂಸಗೊಳಿಸಿ ಉಗ್ರವಾದವನ್ನು ಸಂಪೂರ್ಣ ಮಟ್ಟಹಾಕುವ ಕಾರ್ಯಕ್ಕೆ ಆದ್ಯತೆ ನೀಡಬೇಕಿದೆ ಎಂದರು.

ಉಪಾಧ್ಯಕ್ಷೆ ಗಿರೀಜಾ ಶಿವಪೂಜಿ, ಪದಾಧಿಕಾರಿಗಳಾದ ಆರ್.ಎಸ್. ಅಂಗಡಿ, ಎಸ್.ಎಸ್. ಬಿರಾದಾರ, ಎಲ್.ಬಿ. ಬಿರಾದಾರ, ಡಿ.ಎಲ್. ಹರಿಜನ, ಎಂ.ಎಸ್. ಇನಾಮದಾರ, ಎ.ಎಸ್. ಪಾಟೀಲ, ವಿ.ಎಸ್. ಪಾಟೀಲ, ವಿ.ಎಸ್. ಒಡೆಯರ, ರೇವಣಸಿದ್ದಪ್ಪ ಗುಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.

ಯೋಗಾಪುರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದಾಗಿ ಮಡಿದ ವೀರಯೋಧರಿಗೆ ಯೋಗಾಪುರ ನಿವಾಸಿಗಳು ಭಾವಪೂರ್ಣ ನಮನ ಸಲ್ಲಿಸಿದರು. ಡಾ.ವಿಶ್ವನಾಥ ಪತ್ತಾರ ನೇತೃತ್ವದಲ್ಲಿ ಯೋಗಾಪುರದ ಯುವಕರ ತಂಡ ಮೊಂಬತ್ತಿಯನ್ನು ಬೆಳಗಿ, ಮೌನಾಚರಣೆ ಮಾಡಿ ಅಗಲಿದ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ರಮೇಶ ಸಕ್ರಿ, ಸಂತೋಷ ಯಂಕಪ್ಪಗೋಳ, ಕಲ್ಲಪ್ಪ ಹಿಪ್ಪರಗಿ, ಪ್ರವೀಣ ಸೊಲ್ಲಾಪುರ, ವಿನೋದ ಬಬಲೇಶ್ವರ, ವಿಜಯ ರಜಪೂತ ಮೊದಲಾದವರು ಪಾಲ್ಗೊಂಡಿದ್ದರು.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...