18 C
Bangalore
Friday, December 6, 2019

ರಾಮ ಮಂದಿರ ನಿರ್ವಣಕ್ಕೆ ತಡೆದರೆ ಖಡ್ಗ ಹಿಡಿಯಿರಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯಪುರ: ರಾಮ ಮಂದಿರ ನಿರ್ಮಾಣ ಕೇವಲ ಸ್ಮಾರಕ, ಮೂರ್ತಿ, ಮಂದಿರ ಅಲ್ಲ ಅದು ಹಿಂದುಗಳ ಅಸ್ಮಿತೆ. ರಾಮ ಮಂದಿರ ನಿರ್ವಣಕ್ಕೆ ಯಾರಾದರೂ ತಡೆದರೆ ಕೈಯಲ್ಲಿ ಖಡ್ಗ ಹಿಡಿಯಿರಿ ಎಂದು ಕೇಸರಟ್ಟಿಯ ಶ್ರೀ ಸೋಮಲಿಂಗ ಸ್ವಾಮೀಜಿ ಹೇಳಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ವಣಕ್ಕಾಗಿ ವಿಜಯಪುರದ ಶಿವಾಜಿ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ವಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು. ಪ್ರತಿಯೊಬ್ಬರು ಛತ್ರಪತಿ ಶಿವಾಜಿಗಳಾಗಬೇಕು. ದೇಶ, ಧರ್ಮಕ್ಕಾಗಿ ದುಡಿಯುವಂತವರಾಗಬೇಕು. ನಾವೆಲ್ಲರೂ ಒಂದು, ನಾವು ಹಿಂದು ಎನ್ನುವ ಮನೋಭಾವ ಎಲ್ಲರಲ್ಲಿ ಬೆಳೆಯಬೇಕು ಎಂದರು.

ಜಗತ್ತಿನ ಏಕೈಕ ಹಿಂದು ರಾಷ್ಟ್ರ ಭಾರತ. ಇಲ್ಲಿ ಹಿಂದುಗಳಿಗೆ ತಮ್ಮ ಆರಾಧ್ಯ ದೈವ ರಾಮನ ಮಂದಿರ ಕಟ್ಟಲು ಬೇರೆಯವರಿಂದ ಅನುಮತಿ ಪಡೆಯುವಂತಾಗಿದೆ. ಶತಮಾನದಿಂದ ರಾಮ ಮಂದಿರ ನಿರ್ಮಾಣ ಕೇವಲ ರಾಜಕೀಯಕ್ಕಾಗಿ ಬಳಸಿಕೊಳ್ಳಲಾಗಿದೆ. ಅನೇಕ ಶರಣರು, ಸಾಧು, ಸಂತರು, ದೇಶ ಹಾಗೂ ಧರ್ಮ ರಕ್ಷಕರು ಮಂದಿರಕ್ಕಾಗಿ ತಮ್ಮ ಪ್ರಾಣ ತ್ಯಜಿಸಿದ್ದಾರೆ. ಆದರೂ ರಾಮ ಮಂದಿರ ನಿರ್ಮಾಣ ಮಾಡಲು ಆಗಿಲ್ಲ. ಇನ್ನು ಮುಂದೆ ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ರಾಮಮಂದಿರ ನಿರ್ವಣದವರೆಗೆ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿ, ಇಸ್ಲಾಮರ ಅಕ್ರಮಣದಿಂದಾಗಿ ರಾಮ ಜನ್ಮ ಭೂಮಿಯಲ್ಲಿ ಅನೇಕ ಹಿಂದುಗಳ ಹತ್ಯೆಗಳಾದವು. 3.50 ಲಕ್ಷ ಹಿಂದುಗಳು ರಾಮಮಂದಿರಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ. ಹಿಂದುಗಳ ಸ್ವಾಭಿಮಾನದ ಸಂಕೇತವಾಗಿ ರಾಮ ಮಂದಿರ ನಿರ್ವಣಗೊಳ್ಳಬೇಕಿದೆ. ಆದರೆ ನ್ಯಾಯಾಲಯದಲ್ಲಿ ನ್ಯಾಯ ಸಿಗದೆ ಇರುವುದು ದುರ್ದೈವ ಎಂದರು. ದೇಶದ ಗತ ವೈಭವವನ್ನು ಮರಳಿ ಪಡೆಯಲು ಹಿಂದುಗಳು ಹೋರಾಡಬೇಕಿದೆ. ಮತ್ತೊಮ್ಮೆ ಭಾರತ ವಿಶ್ವಗುರು ಆಗಬೇಕಿದೆ. ಪುನರ್ ರಾಷ್ಟ್ರೀಯತೆಯ ನಿರ್ಮಾಣ ಆಗಬೇಕಿದೆ ಎಂದು ತಿಳಿಸಿದರು. ಇದೇ ವೇಳೆ ರಾಮ ಮಂದಿರ ನಿರ್ವಣಕ್ಕೆ ಆಗ್ರಹಿಸಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಬಲೇಶ್ವರದ ಬೃಹ್ಮನ್ಮಠದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಬುರಣಾಪುರದ ಯೋಗೇಶ್ವರಿ ಮಾತಾಜಿ, ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಬಸಯ್ಯ ಹಿರೇಮಠ ಇನ್ನಿತರರಿದ್ದರು.

ಹಿಂದುಗಳ ವಿರುದ್ಧ ಷಡ್ಯಂತ್ರ

ದೇಶದಲ್ಲಿ ಹಿಂದುಗಳ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ದೇಶವನ್ನು ಕ್ರೖೆಸ್ತ್, ಇಸ್ಲಾಮೀಕರಣ ಮಾಡಲು ಕೆಲ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಹಿಂದು ಧರ್ಮದ ಮೇಲೆ ಧರ್ವಸ್ತ್ರ ಪ್ರಯೋಗಿಸಲಾಗುತ್ತಿದೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಹೇಳಿದರು.

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ಈ ಹಿಂದಿನಿಂದಲೂ ನಿರ್ಬಂಧಿಸಲಾಗಿದೆ. ಧಾರ್ವಿುಕ ಭಾವನೆಗಳಿಗೆ ಧಕ್ಕೆ ತರುವ ಯತ್ನ ನ್ಯಾಯಾಲಯಗಳ ಮೂಲಕ ಮಾಡಲಾಗುತ್ತಿದೆ. ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು ಎಂದು ಹೋರಾಟ ನಡೆಸಿರುವ ತೃಪ್ತಿ ದೇಸಾಯಿ ಮೂಲತಃ ಕ್ರಿಶ್ಚಿಯನ್ನರು. ನ್ಯಾಯಾಲಯದ ಮೂಲಕ ಹಿಂದುಗಳ ಭಾವನೆಗಳನ್ನು ಬಂಧನಗೊಳಿಸುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ ಎಂದು ದೂರಿದರು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು

* ಹಿಂದು ಭಾವನೆಗಳನ್ನು ಕೆಣಕುವ ಪ್ರಸಂಗಗಳು ಇನ್ನು ಮುಂದೆ ಮರುಕಳಿಸಬಾರದು.

* ರಾಮ ಮಂದಿರ ನಿರ್ವಣಕ್ಕಿರುವ ಎಲ್ಲ ಅಡೆತಡೆಗಳನ್ನು ಸಂಸತ್ತಿನಲ್ಲಿ ಮಸೂದೆ ರಚಿಸುವ ಮೂಲಕ ನಿವಾರಿಸಬೇಕು.

* ಮುಸ್ಲಿಂ ಸಮಾಜವು ತಾನೇ ನೀಡಿದ ವಚನದಂತೆ ಸ್ವಇಚ್ಛೆಯಿಂದ ಜನ್ಮಸ್ಥಾನದ ಸ್ಥಳವನ್ನು ಹಿಂದು ಸಮಾಜಕ್ಕೆ ನೀಡಬೇಕು.

* ಭಾರತ ಸರ್ಕಾರವು ಸುಪ್ರೀಂ ಕೋರ್ಟ್​ಗೆ ನೀಡಿದ ಪ್ರಮಾಣ ಪತ್ರದಂತೆ ಜನರ ಭಾವನೆಯನ್ನು ಮನ್ನಿಸಿ 1993ರಲ್ಲಿ ಸ್ವಾಧೀನ ಪಡಿಸಿದ 70 ಎಕರೆ ಭೂಮಿಯನ್ನು ಮಂದಿರ ನಿರ್ವಣಕ್ಕೆ ನೀಡಬೇಕು.

* ರಾಮ ಮಂದಿರದ ನಕ್ಷೆಯಂತೆ ಸಂಗ್ರಹಿಸಿದ ಇಟ್ಟಿಗೆ, ಕೆತ್ತಿದ ಕಲ್ಲುಗಳಿಂದ ಸಂತರ ನೇತೃತ್ವದಲ್ಲಿ ಮಂದಿರ ನಿರ್ಮಾಣ ಆಗಬೇಕು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...