ಸಿಸಿ ಕ್ಯಾಮರಾ ಅಳವಡಿಸಲು ಮನವಿ

ವಿಜಯಪುರ: ನಗರದ ಹೃದಯ ಭಾಗ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಗೃಹ ಸಚಿವ ಎಂ.ಬಿ.ಪಾಟೀಲ ಅವರನ್ನು ಕೋರಿದ್ದಾರೆ.
ನಗರದಲ್ಲಿ ಹಗಲು ಮತ್ತು ರಾತ್ರಿ ವೇಳೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕೊಲೆ ಮತ್ತು ದರೋಡೆಗಳು ನಡೆಯುವ ಸಂಭವವಿರುತ್ತದೆ. ಈ ಸ್ಥಳಗಳಲ್ಲಿ ಗುಪ್ತವಾಗಿ ಕೊಲೆಗಳು ನಡೆಯುವ ಅನೇಕ ಘಟನೆಗಳು ಜರುಗಿದ್ದು, ಭಯದ ವಾತಾವರಣದಲ್ಲಿ ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಕಾರಣ ನಗರದ ಹೃದಯ ಭಾಗ ಮತ್ತು ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ನಗರ ನಿವಾಸಿಗಳಿಗೆ ಅನುಕೂಲ ಕಲ್ಪಿಸಬೇಕೆಂದು ಯತ್ನಾಳ ಮನವಿ ಮಾಡಿದ್ದಾರೆ.