20.8 C
Bangalore
Sunday, December 8, 2019

ನಿರುದ್ಯೋಗ ನಿವಾರಣೆಯಿಂದ ದೇಶದ ಅಭಿವೃದ್ಧಿ ಸಾಧ್ಯ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ವಿಜಯಪುರ: ಕೇವಲ ಧಾರ್ಮಿಕ ಹಾಗೂ ಜಾತಿ ಭಾವದಿಂದ ಸದೃಢ ದೇಶ ಕಟ್ಟಲು ಸಾಧ್ಯವಿಲ್ಲ. ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗದ ಭದ್ರತೆ, ಜೀವನ ನಡೆಸಲು ಯೋಗ್ಯ ವೇತನ ನೀಡುವುದೇ ದೇಶದ ಅಭಿವೃದ್ಧಿ ಎಂದು ಕೆವಿಜಿ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ. ಗಾಂಧಿ ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯುಥ್ ಆರ್ಗನೈಸೇಷನ್(ಎಐಡಿವೈಒ) ಸಂಘಟನೆ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾಜವಾದಿ ಕ್ರಾಂತಿ 102ನೇ ದಿನಾಚರಣೆ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಸಮಾಜವಾದಿ ಕ್ರಾಂತಿ ಎಂದರೆ ಸಮಾಜ ಬದಲಾವಣೆ ಎಂದರ್ಥ. ಬದಲಾವಣೆ ಎಂದರೆ ಮಾನವನಿಂದ ಮಾನವ ಶೋಷಣೆ ಮುಕ್ತಿ ಪಡೆಯುವುದು. ಆದರೆ, ದೇಶದಲ್ಲಿ ಆಡಳಿತ ನಡೆಸುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ, ಬಡತನ, ನಿರುದ್ಯೋಗ, ಶಿಕ್ಷಣದ ವ್ಯಾಪಾರಿಕರಣದಂಥ ನೀತಿಗಳಿಂದ ಪ್ರಚಲಿತ ಆರ್ಥಿಕತೆ ದಿವಾಳಿಯಾಗುತ್ತಿದೆ. ದೇಶದಲ್ಲಿ ದುಡಿಯುವ ಯುವಜನತೆ ಪ್ರಮಾಣ ಗಣನೀಯವಾಗಿ ಏರುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಸೃಷ್ಟಿ ಮಾತು ಮಾತಾಗಿ ಉಳಿದಿದೆ. ಈಗಾಗಲೇ ಕಾರ್ಯ ಕೆಲಸ ಹೊಂದಿದ ಜನ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಹೀಗಾದರೆ ದೇಶದ ಅಭಿವೃದ್ಧಿ ಯಾಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಮಹಾಲಿಂಗ ಪೋಳ ಮಾತನಾಡಿ, ಲೆನಿನ್ ಎಂಬ ಮಹಾನ್ ಸಮಾಜವಾದಿ ಶಿಲ್ಪಿ ಮಾರ್ಕ್ಸ್‌ರವರ ವಿಚಾರದಿಂದ ರಷ್ಯಾದಲ್ಲಿ 1917ರಲ್ಲಿ ಸಮಾಜವಾದಿ ಕ್ರಾಂತಿ ನೆರವೇರಿಸಿ ಕಾರ್ಮಿಕರ ಸರ್ಕಾರ ಅಧಿಕಾರ ಸ್ಥಾಪಿಸಿದರು. ದೇಶದ ಆರ್ಥಿಕ, ಶಾಮಾಜಿಕ, ಸಾಂಸ್ಕೃತಿಕ ವಾತವರಣದಿಂದ ಜನರ ಒಗ್ಗಟ್ಟು ಬೆಳೆಸಿ ದೇಶದ ಅಭಿವೃದ್ಧಿಗೆ ಹರಿಕಾರರಾದರು. ಲೆನಿನ್ ನಂತರದಲ್ಲಿ ಸ್ಟಾಲಿನ್ ಎಂಬ ನಾಯಕ ರಷ್ಯಾ ದೇಶದ ಸಂಪತ್ತು ಹೆಚ್ಚಿಸಿ ಇಡೀ ಪ್ರವಪಂಚವೇ ಮಾದರಿ ದೇಶವನ್ನಾಗಿ ನಿರ್ಮಿಸಿದರು. ದೇಶದ ಯುವಜನತೆ ಆ ಮಹಾನ್ ವ್ಯಕ್ತಿಗಳ ವಿಚಾರಗಳನ್ನು ತಿಳಿದುಕೊಂಡು ಸಮಾಜವಾದಿ ಕ್ರಾಂತಿ ನೆರವೇರಿಸಬೇಕು ಎಂದರು.
ಎಐಡಿವೈಒ ಜಿಲ್ಲಾಧ್ಯಕ್ಷ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, 1917 ಕ್ರಾಂತಿ ನಂತರ ಇಡೀ ದೇಶದ ಚಿತ್ರಣವೇ ಬದಲಾಯಿತು. ನಿರುದ್ಯೋಗ ಇಲ್ಲದ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ನಮ್ಮ ದೇಶದಲ್ಲಿ ಕ್ರಾಂತಿ ಮಾಡಲು ಕಾಮ್ರೆಡ್ ಶಿವದಾಸ ಘೋಷ ಅವರು ಎಐಡಿವೈಒ ಕ್ರಾಂತಿಕಾರಿ ಸಂಘಟನೆ ಕಟ್ಟಿದ್ದು, ಇವತ್ತು ನಿರುದ್ಯೋಗ, ಅಶ್ಲೀಲ ಸಿನಿಮಾ ಸಾಹಿತ್ಯ ನಿಷೇಧದಂಥ ಬಲಿಷ್ಠ ಹೋರಾಟಗಳು ಬೆಳೆಸುತ್ತಿದೆ. ತಾವೆಲ್ಲ ಈ ಸಂಘಟನೆಗೆ ಬೆಂಬಲಿಸಬೇಕು ಎಂದು ಹೇಳಿದರು.
ಜಿಲ್ಲಾ ಸಮಿತಿ ಸದ್ಯ ಅಶೋಕ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘಟನಾಧಿಕಾರಿ ಶ್ರೀಕಾಂತ ಕೊಂಡಗೂಳಿ, ಬಾಳು ಜೇವೂರ, ಆನಂದ ಕುಂಟೋಜಿ, ಆಕಾಶ ರಾಮತೀರ್ಥ, ಶಿವಬಾಳಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...