21.7 C
Bengaluru
Tuesday, January 21, 2020

ಪಟ್ಟಭದ್ರರ ಸ್ವಾರ್ಥದ ಫಲವೇ ಜಾತಿ ವ್ಯವಸ್ಥೆ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ವಿಜಯಪುರ: ಕೆಲ ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥದ ಫಲವೇ ಜಾತಿ ವ್ಯವಸ್ಥೆ. ತಮ್ಮ ತಮ್ಮ ಸ್ವಾರ್ಥಕ್ಕಾಗಿ ಸಮಾಜ ವಿಂಗಡಣೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಐಶ್ವರ್ಯ ನಗರದಲ್ಲಿ ಅಂದಾಜು 12 ಕೋಟಿ ರೂ.ವೆಚ್ಚದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸಂಘ ಜೀವಿ. ಎಲ್ಲ ಜಾತಿ, ಮತ, ಪಂಥಗಳೊಂದಿಗೆ ಬೆರೆತು ಬಾಳಬೇಕು. ನಾನು ಕುರುಬ ಸಮಾಜದಲ್ಲಿ ಜನಿಸಿದವನು. ನೀವು ಪಂಚಮಸಾಲಿ ಸಮಾಜದವರು. ಕಾಯಿಲೆ ಬಿದ್ದಾಗ ನಮ್ಮದೇ ಸಮಾಜದ ರಕ್ತ ಕೊಡಿ ಎನ್ನಲಿಕ್ಕಾಗುತ್ತದಾ? ಜಾತಿ, ಮತ, ಪಂಗಡ ನಮ್ಮ ಸ್ವಾರ್ಥಕ್ಕಾಗಿ ಮಾಡಿಕೊಂಡಿದ್ದೇವೆ. ಪಂಚಮಸಾಲಿ ಜಾತ್ಯತೀತ ಸಮಾಜ. ಚನ್ನಮ್ಮ ಅವರನ್ನು ಜಾತಿ, ಮತ, ಧರ್ಮದ ಎಲ್ಲೆ ಮೀರಿ ಆರಾಧಿಸಲಾಗುತ್ತಿದೆ ಎಂದರು.
ಬ್ರಿಟಿಷರನ್ನು ವಿರುದ್ಧ ಹಾಕಿಕೊಳ್ಳುವುದು ಸಾಮಾನ್ಯ ಕೆಲಸ ಆಗಿರಲಿಲ್ಲ. ಅಂಥ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಳಲ್ಲ ರಾಣಿ ಚನ್ನಮ್ಮ ಅವಳ ಶೌರ್ಯ ಮೆಚ್ಚುವಂಥದ್ದು. ಅವರ ಭಂಟನಾಗಿ ಸಂಗೊಳ್ಳಿ ರಾಯಣ್ಣ ಸಹ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವ ತ್ಯಾಗ ಮಾಡಿದರು. ಈ ಮಣ್ಣಿನಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಮಣ್ಣಿನ ಋಣ ತೀರಿಸಬೇಕು. ತಾಯ್ನಡಿನ ಋಣತೀರಿಸಬೇಕು. ಈ ವಿಷಯದಲ್ಲಿ ಚನ್ನಮ್ಮ ಮತ್ತು ರಾಯಣ್ಣ ಅವರನ್ನು ನಾವು ಆದರ್ಶವಾಗಿ ಇಟ್ಟುಕೊಳ್ಳಬೇಕೆಂದರು.
ಇತ್ತೀಚಿನ ದಿನಗಳಲ್ಲಿ ಸಮುದಾಯ ಭವನಗಳ ಅವಶ್ಯಕತೆ ಹೆಚ್ಚುತ್ತಿದೆ. ನಮ್ಮ ಭಾಗದಲ್ಲಿ ಮನೆ ಮುಂದೆ ಚಪ್ಪರ ಹಾಕಿ ಮದುವೆ ಸಮಾರಂಭ ಆಗುತ್ತಿದ್ದವು. ಈಗ ಆ ಸಂಪ್ರದಾಯ ಕಡಿಮೆ ಆಗುತ್ತಿದೆ. ನಮ್ಮ ಹಿರಿಯರು ಒಳ್ಳೆಯ ಸಂಪ್ರದಾಯ ಬಿಟ್ಟು ಹೋಗಿದ್ದಾರೆ. ಅವುಗಳನ್ನು ನಾವು ಕಾಪಾಡಿಕೊಂಡು ಹೋಗಬೇಕಿದೆ ಎಂದರು.
ಚನ್ನಮ ಹೆಣ್ಮಕ್ಕಳಿಗೆ ಸ್ಫೂರ್ತಿ: ಗೃಹ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಕಿತ್ತೂರ ಚನ್ನಮ್ಮ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರು ಭಾರತದ ಹೆಮ್ಮೆಯ ಪುತ್ರಿ. ಇಂದಿನ ಹೆಣ್ಣು ಮಕ್ಕಳಿಗೆ ಚನ್ನಮ್ಮ ಸ್ಫೂರ್ತಿ. ಅಂಥ ಮಹಾನ್ ಹೋರಾಟಗಾರ್ತಿ ಹೆಸರಿನಲ್ಲಿ ಭವ್ಯ ಭವನ ನಿರ್ಮಾಣಗೊಂಡಿದೆ. ಅಂದಾಜು 12 ಕೋಟಿ ರೂ. ವೆಚ್ಚದಲ್ಲಿ ಉತ್ತರ ಕರ್ನಾಟಕದಲ್ಲೇ ಅತಿ ದೊಡ್ಡ ಭವನ ನಿರ್ಮಿಸಿದ್ದು ಹೆಮ್ಮೆ ಸಂಗತಿ. ಸದರಿ ಭವನಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಮೂರು ಕೋಟಿ ರೂ. ಸಹಾಯಧನ ನೀಡಿದ್ದು, ಇದಕ್ಕೆ ಸಿದ್ದರಾಮಯ್ಯ ಅವರ ಹೃದಯ ವೈಶಾಲ್ಯತೆಯೇ ಕಾರಣ ಎಂದರು.
ಪಂಚಮಸಾಲಿ ಕೃಷಿ ಆಧಾರಿತ ಸಮಾಜ. ಒಕ್ಕಲುತನವೇ ಈ ಸಮಾಜದ ಜೀವಾಳ. ಇಂಥ ಒಕ್ಕಲುತನ ಅಭಿವೃದ್ಧಿಗೆ ನೀರಾವರಿ ಅಗತ್ಯ ಎಂದು ಅರಿತು ಹೆಚ್ಚಿನ ನೀರಾವರಿ ಕೈಗೊಳ್ಳಲು ಶ್ರಮಿಸಿದ್ದು ಸಂತಸ ತಂದಿದೆ. ಇನ್ನೂ ಅನೇಕ ನೀರಾವರಿ ಯೋಜನೆಗಳು ಬಾಕಿ ಇದ್ದು, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಸಹಕಾರದೊಂದಿಗೆ ಪೂರ್ಣಗೊಳಿಸಲಾಗುವುದು ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಖಡ್ಗ ನೀಡಿ ಗೌರವಿಸಲಾಯಿತು. ಕೇಂದ್ರ ಸಚಿವ ರಮೇಶ ಜಿಗಜಿಣಗಿ ಚನ್ನಮ್ಮ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಪೂಜ್ಯ ಸಿದ್ಧೇಶ್ವರ ಶ್ರೀಗಳು, ಜಗದ್ಗುರು ವಚನಾನಂದ ಶ್ರೀ, ಅಭಿನವ ಶಿವಪುತ್ರ ಸ್ವಾಮೀಜಿ, ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ, ಡಾ. ಮಹಾದೇವ ಶಿವಾಚಾರ್ಯರು, ಯೋಗೇಶ್ವರಿ ಮಾತಾ, ಮಹಾಂತಲಿಂಗ ಶ್ರೀ ಸೇರಿದಂತೆ ಇತರರು ಸಾನ್ನಿಧ್ಯ ವಹಿಸಿದ್ದರು.
ಸಚಿವರಾದ ಶಿವಾನಂದ ಪಾಟೀಲ, ಎಂ.ಸಿ. ಮನಗೂಳಿ, ಕುಡಿಯುವ ನೀರು ಹಾಗೂ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಗೋವಿಂದ ಕಾರಜೋಳ, ದೇವಾನಂದ ಚವಾಣ್, ವಿಪ ಸದಸ್ಯರಾದ ಹಣಮಂತ ನಿರಾಣಿ, ಅರುಣ ಶಹಾಪುರ, ಮಾಜಿ ಶಾಸಕ ವಿಠಲ ಕಟಕಧೋಂಡ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮೇಯರ್ ಶ್ರೀದೇವಿ ಲೋಗಾಂವಿ, ಜಿಪಂ ಸದಸ್ಯ ಉಮೇಶ ಕೋಳಕೂರ, ಪ್ರಫುಲ್ ಮಂಗಾನವರ, ಪಾಲಿಕೆ ಸದಸ್ಯ ರವೀಂದ್ರ ಲೋಣಿ ಇತರರಿದ್ದರು. ಡಾ. ಸುರೇಶ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಣಿ ಚನ್ನಮ್ಮ ಅವರ ವಂಶಸ್ಥರನ್ನು ಸನ್ಮಾನಿಸಲಾಯಿತು.
ಕುತೂಹಲ ಮೂಡಿಸಿದ ನಡೆ: ಕಿತ್ತೂರ ರಾಣಿ ಚನ್ನಮ್ಮ ಸಮುದಾಯ ಭವನ ಉದ್ಘಾಟನೆ ಸಮಾರಂಭ ಹಲವು ರಾಜಕೀಯ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಯಿತು. ಆರಂಭದಲ್ಲೇ ಸಚಿವ ಎಂ.ಬಿ. ಪಾಟೀಲ, ರಮೇಶ ಜಿಗಜಿಣಗಿ ವೇದಿಕೆ ಮೇಲೆ ಅಂತರ ಕಾಯ್ದುಕೊಂಡರು. ಎಂ.ಬಿ. ಪಾಟೀಲರು ಏಕಾಂಗಿಯಾಗಿ ಕುಳಿತಿದ್ದರು. ತಡವಾಗಿ ಬಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಗಜಿಣಗಿ ಮತ್ತು ಎಂ.ಬಿ. ಪಾಟೀಲರ ನಡುವಿನ ಅಂತರ ಕಡಿತಗೊಳಿಸಿದರಲ್ಲದೆ ಎಂ.ಬಿ. ಪಾಟೀಲರ ಜತೆ ಮಾತುಕತೆಯಲ್ಲಿ ತಲ್ಲೀನರಾದರು. ಎಂ.ಬಿ. ಪಾಟೀಲರನ್ನು ದಾಟಿಕೊಂಡು ಹಿಂದೆ ಹೋಗಿ ಕುಳಿತಿದ್ದ ಶಾಸಕ ಗೋವಿಂದ ಕಾರಜೋಳರ ಹೆಸರನ್ನು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದಾಗ ಕಾರಜೋಳ ವೇದಿಕೆಯಲ್ಲಿರಲಿಲ್ಲ. ಸಿದ್ದರಾಮಯ್ಯ ಅವರು ವೇದಿಕೆಗೆ ಆಗಮಿಸುವ ವೇಳೆ ಜಿಗಜಿಣಗಿ ಹಸ್ತಲಾಘವಕ್ಕೆ ಕೈ ಚಾಚಿದರಾದರೂ ಸಿದ್ದರಾಮಯ್ಯ ಮಾತ್ರ ಮುಂದೆ ಬಂದು ಯತ್ನಾಳರ ಕೈ ಕುಲುಕಿದರು. ಬಳಿಕ ಶಾಸಕ ಯತ್ನಾಳರ ಹೆಗಲ ಮೇಲೆ ಕೈ ಹಾಕಿ ಪಿಸುಮಾತು ಹೇಳಿದ ಸಿದ್ದರಾಮಯ್ಯ ನಡೆ ಸಭಿಕರ ಗಮನ ಸೆಳೆಯಿತು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...