More

    ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ದೊರಕಲಿ

    ವಿಜಯಪುರ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಪೂರೈಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ(ಎಐಯುಟಿಯುಸಿ) ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಸಂಘಟನೆ ಜಿಲ್ಲಾ ಸಂಚಾಲಕ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ ನಂತರ ಕಟ್ಟಡ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಇದೀಗ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗುತ್ತಿದೆ. ಆದರೆ ಬಹುಪಾಲು ಕಾರ್ಮಿಕರಿಗೆ ಹಣ ವರ್ಗಾವಣೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತಾಂತ್ರಿಕ ತೊಂದರೆಯಿಂದಾಗಿ ಲಾನುಭವಿಗಳ ಕೈಗೆ ಹಣ ಸೇರುತ್ತಿಲ್ಲ. ಬಹಳ ಮಂದಿ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಲ್ಲ. ಕಾರ್ಮಿಕರಿಗೆ ರೇಷನ್ ಕಿಟ್ ವಿತರಣೆಯಲ್ಲಿ ಕಳಪೆ ಆಹಾರ ಸಾಮಗ್ರಿ ನೀಡಿರುವುದು ಕಂಡು ಬಂದಿದೆ. ವೈದ್ಯಕೀಯ ಸಹಾಯ ಧನ ನೀಡುವ ವಿಚಾರದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದೆ. ಕಟ್ಟಡ ಕಾರ್ಮಿಕನೊಬ್ಬ ಅನಾರೋಗ್ಯದಿಂದ ಆಸ್ಪತ್ರೆ ಸೇರಿದರೆ ವೈದ್ಯಕೀಯ ವೆಚ್ಚ ಭರಿಸುವಲ್ಲಿ ವಿಳಂಬವಾಗುತ್ತಿದೆ. ಮದುವೆ ಸಹಾಯಧನ, ಸಹಜ ಮರಣ ಪರಿಹಾರ, ಹೆರಿಗೆ ಭತ್ಯೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.

    ಜಿಲ್ಲಾ ಸಹ ಸಂಚಾಲಕಿ ಮಹಾದೇವಿ ಧರ್ಮಶೆಟ್ಟಿ ಮಾತನಾಡಿ, ಸ್ಲಂ ಬೋರ್ಡ್ ವತಿಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮನೆ ನಿರ್ಮಿಸಿಕೊಡುವುದಾಗಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕೋಟ್ಯಂತರ ರೂ. ಹಣ ಪಡೆಯಲಾಗಿತ್ತು. ಆದರೆ ಯಾರಿಗೂ ಮನೆ ನಿರ್ಮಿಸಿಕೊಡದೆ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದರು. ಮುಖಂಡರಾದ ಆಕಾಶ ರಾಮತೀರ್ಥ, ಾತಿಮಾ ಶೇಖ, ನೂರಜಾನ ಮುಜಾವರ, ಮಹಮ್ಮದ ನದಾ ಮುಂತಾದವರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts