20.4 C
Bengaluru
Sunday, January 19, 2020

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.
ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿರುವ ಕನ್ನಡ ಭವನದಲ್ಲಿ ವಿವಿಯ ಗಾಂಧಿ ಅಧ್ಯಯನ ಕೇಂದ್ರ, ಎನ್‌ಎಸ್‌ಎಸ್ ಕೋಶ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ‘ಶಿಕ್ಷಣ ಮತ್ತು ಅಭಿವೃದ್ಧಿಯ ಕುರಿತು ಗಾಂಧೀಜಿ ಅವರ ವಿಚಾರಗಳು’ ಎಂಬ ವಿಷಯದ ಕುರಿತು ಭಾನುವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧೀಜಿ ಅವರು ನಮ್ಮ ಜೀವನದ ಪ್ರತಿ ಹಂತಕ್ಕೂ ಪ್ರಸ್ತುತವಾಗುತ್ತಾರೆ. ನಾವೆಲ್ಲರೂ ಇಂದು ಓಟದ ಬದುಕನ್ನು ನಡೆಸುತ್ತ ಸ್ವಾರ್ಥ ಜೀವನವನ್ನು ನಡೆಸುತ್ತಿದ್ದೇವೆ. ನಮ್ಮ ಆಸೆ, ಆಮಿಷಗಳಿಗೆ ನಮ್ಮ ಸುತ್ತಲಿರುವ ಸುಂದರ ವಾತಾವರಣವನ್ನು ಹಾಳು ಮಾಡುತ್ತಿದ್ದೇವೆ. ಇಂತಹ ಪರಿಸ್ಥಿತಿಯನ್ನು ಹೋಗಲಾಡಿಸಲು ಜಗತ್ತಿನಾದ್ಯಂತ ಜ್ಞಾನಿ, ತತ್ವಜ್ಞಾನಿ, ಚಿಂತಕರೆಲ್ಲ ಗಾಂಧೀಜಿ ಅವರ ವಿಚಾರಧಾರೆ, ಪ್ರಯೋಗಗಳು ನಮಗೇನಾದರೂ ಪರಿಹಾರ ನೀಡಬಹುದೇ ಎಂಬುದನ್ನು ಹುಡುಕುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳಾ ವಿವಿ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಲಕ್ಕಣ್ಣನವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗಾಂಧೀಜಿ ಅವರ ವಿಚಾರಗಳು ಅತ್ಯಂತ ವಿಶಾಲವಾದಂತವು. ಎಲ್ಲ ರಂಗಗಳಲ್ಲಿಯೂ ಗಾಂಧೀಜಿ ತಮ್ಮದೇ ಆದ ವಿಚಾರಗಳನ್ನು, ಸಂದೇಶಗಳನ್ನು ನೀಡಿದ್ದಾರೆ. ಗ್ರಾಮೀಣ ಅಭಿವೃದ್ಧಿ, ರಾಜಕೀಯ, ಪತ್ರಿಕೋದ್ಯಮ, ಕೃಷಿ, ಸಮಾಜ ಸುಧಾರಣೆ, ದೇಶದ ಅಭಿವೃದ್ಧಿ ಹೀಗೆ ಹತ್ತು ಹಲವಾರು ವಿಷಯಗಳ ಮೇಲೆ ಗಾಂಧೀಜಿ ಅವರ ವಿಚಾರಗಳು, ಸಂದೇಶಗಳು ಇಂದಿಗೂ ಎಲ್ಲರಿಗೂ ಪ್ರಸ್ತುತವಾಗಿವೆ ಎಂದರು.
ಸ್ಪರ್ಧಾ ಜಗತ್ತಿನಲ್ಲಿ ನಾವು ಎಲ್ಲವನ್ನು ನಿರ್ಲರ್ಕ್ಷ್ಯಿಸುತ್ತಿದ್ದೇವೆ. ನಮ್ಮ ಸ್ವಾರ್ಥ ಬದುಕನ್ನು ನಡೆಸುವ ಮೂಲಕ ನಮ್ಮ ಬದುಕನ್ನು ನಾವೇ ಹಾಳು ಮಾಡಿಕೊಳ್ಳುತ್ತಿದ್ದೇವೆ. ಗಾಂಧೀಜಿ ಅವರ ಶಿಕ್ಷಣದ ಪರಿಕಲ್ಪನೆಯನ್ನು ಅಳವಡಿಸಿಕೊಂಡಾಗ ಮಾತ್ರ ಜೀವನ ನಡೆಸಲು ಸುಲಭವಾಗಬಹುದು ಎಂದು ತಿಳಿಸಿದರು.
ಅಜೀಂ ಪ್ರೇಮ್‌ಜೀ ಫೌಂಡೇಷನ್‌ನ ಸದಸ್ಯ ಓಂ ಪ್ರಕಾಶ, ಮಹಿಳಾ ವಿವಿ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ತಹಮೀನಾ ಕೋಲಾರ, ಲೇಖಕ ಡಾ.ನಾಗಣ್ಣ ಕಿಲಾರಿ, ವಿವಿಧ ಶಾಲಾ ಶಿಕ್ಷಕರು, ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...