More

    ಸಂಶೋಧನಾ ಕ್ಷೇತ್ರದಲ್ಲಿ ತಂತ್ರಜ್ಞಾನ ಅವಶ್ಯ

    ವಿಜಯಪುರ: ಸಂಶೋಧನಾ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮಹತ್ವದ್ದಾಗಿದ್ದು, ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನದ ಸಹಾಯದೊಂದಿಗೆ ಸಂಶೋಧನೆ ಕೈಗೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕುಲಪತಿ ಪ್ರೊ.ಎಸ್.ಪಿ.ಆಲಗೂರ ಹೇಳಿದರು.
    ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಗಣಕ ವಿಜ್ಞಾನ ಅಧ್ಯಯನ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಕೃತಕ ಬುದ್ಧಿಮತ್ತೆ ಮತ್ತು ಸ್‌ಟಾ ಕಂಪ್ಯೂಟಿಂಗ್ ಐಸಿಎಐಎಸ್‌ಸಿ-2021’ ಕುರಿತ ಮೂರು ದಿನ ಹಮ್ಮಿಕೊಂಡಿರುವ ತಂತ್ರಜ್ಞಾನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆಯು ಯಾವುದೇ ಕೆಲಸವನ್ನು ಚುರುಕಾಗಿಸಲು ಹಾಗೂ ವೇಗವಾಗಿ ನಿರ್ಧಾರವನ್ನು ತೆಗೆದುಕೊಳ್ಳಲು ಸಹಾಯಕವಾಗಿದೆ. ಆದ್ದರಿಂದ ವಿದ್ಯಾರ್ಥಿನಿಯರು ತಂತ್ರಜ್ಞಾನದ ಬಗ್ಗೆ ಹೆಚ್ಚು ತಿಳಿದುಕೊಂಡು ಪರಿಣತಿ ಹೊಂದಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಮಾತನಾಡಿ, ತಂತ್ರಜ್ಞಾನದ ಬೆಳವಣಿಗೆಯು ಮಾನವನ ಪ್ರಯತ್ನವನ್ನು ಮತ್ತು ದೋಷಗಳನ್ನು ಕಡಿಮೆ ಮಾಡಿ, ವೇಗವಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಜತೆಗೆ ಪ್ರತಿಯೊಂದು ತಾಂತ್ರಿಕ ಚಟುವಟಿಕೆಗೆ ಕೃತಕ ಬುದ್ಧಿಮತ್ತೆ ಅತ್ಯವಶ್ಯವಾಗಿದೆ ಎಂದರು. ಮುಂಬರುವ ಯುವ ಪೀಳಿಗೆ ಕೃತಕ ಬುದ್ಧಿಮತ್ತೆಯು ಮೇಲೆ ಮಾತ್ರ ಅವಲಂಬಿತರಾಗದೆ, ಮಾನವನ ಸಾಮರ್ಥ್ಯ ಮತ್ತು ಸಾಮಾಜಿಕ ಚಿಂತನೆಯನ್ನು ಸಹ ಗೌರವಿಸಬೇಕು ಎಂದು ತಿಳಿಸಿದರು. ಅಲಹಾಬಾದ್‌ನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಪ್ರೊ.ಪಿ.ನಾಗಭೂಷಣ ಆನ್‌ಲೈನ್ ಮೂಲಕ ತಂತ್ರಜ್ಞಾನದ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ವಿವಿ ಮೌಲ್ಯಮಾಪನಾ ಕುಲಸಚಿವ ಪ್ರೊ.ಪಿ.ಜಿ.ತಡಸದ, ಆರ್ಥಿಕ ಅಧಿಕಾರಿ ಪ್ರೊ.ವಿಜಯಾ ಕೋರಿಶೆಟ್ಟಿ, ಪ್ರೊ.ಅಜೀಜ್ ಮಕಾನದಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts