20.4 C
Bengaluru
Sunday, January 19, 2020

ಡಾ.ಅಂಬೇಡ್ಕರ್‌ರಿಂದ ಸರ್ವ ಸಮಾಜಕ್ಕೂ ನ್ಯಾಯ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ವಿಜಯಪುರ: ಡಾ.ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಒಲವನ್ನು ನೀಡದೇ ಇಡೀ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದು ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ. ತಡಸದ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪರಿಶಿಷ್ಟ ಜಾಗಿ/ಪರಿಶಿಷ್ಟ ಪಂಗಡ ಘಟಕ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ವಿವಿಯ ಜ್ಞಾನಶಕ್ತಿ ಆವರಣದ ಡಾ.ಅಂಬೇಡ್ಕರ್ ಸಭಾಭವನದಲ್ಲಿ ಮಹಾಪರಿನಿರ್ವಾಣ ದಿನಾಚರಣೆ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಒಬ್ಬ ವ್ಯಕ್ತಿ ಸಮುದಾಯವನ್ನು ಮೇಲೆತ್ತಿ ಇಹಲೋಕ ಬಿಟ್ಟು ಹೋಗಿರುವುದನ್ನು ಪರಿನಿರ್ವಾಣ ಎಂದು ಕರೆಯುತ್ತೇವೆ. ಮಹಾಪರಿನಿರ್ವಾಣ ಇಂತಹ ಶಬ್ಧವನ್ನು ಬುದ್ಧರ ಪರಿನಿರ್ವಾಣ ಪದಗಳಿಗೆ ತುಲನೆ ಮಾಡಬೇಕಾಗುತ್ತದೆ. ಇಂಥ ಪದಗಳನ್ನು ನಾವು ಎಲ್ಲರಿಗೂ ಬಳಸಲು ಸಾಧ್ಯವಿಲ್ಲ. ಆದರೆ, ಅಂಬೇಡ್ಕರ್ ಅವರಿಗೆ ಅಂಥ ಪದಗಳನ್ನು ಬಳಸಿದ್ದೇವೆ. ಕಾರಣ ಅವರಲ್ಲಿ ಅಂಥ ಜ್ಞಾನವಿತ್ತು. ಇಂದಿನ ಸಮಾಜಕ್ಕೆ ಬೇಕಾಗುವಂಥ ನ್ಯಾಯ ಒದಗಿಸಿದರು, ಎಲ್ಲರ ರಕ್ಷಣೆ ಭಾರವನ್ನು ಅವರು ಹೊತ್ತಿದ್ದರು ಎಂದು ಹೇಳಿದರು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಘಟಕದ ನಿರ್ದೇಶಕ ಸಕ್ಪಾಲ ಹೂವಣ್ಣ ಮಾತನಾಡಿ, ದೇಶದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಡಾ.ಅಂಬೇಡ್ಕರ್ ಜಯಂತಿ ಆಚರಿಸಿಲಾಗುತ್ತಿದೆ. ಅಂಬೇಡ್ಕರ್ ಅವರು ಮಹಾ ಮೇದಾವಿಗಳಾಗಿದ್ದರು. ಅವರು ಹಾಕಿಕೊಟ್ಟಿರುವ ಸಂವಿಧಾನದ ಹಾದಿಯಲ್ಲಿಯೇ ನಾವು ನಡೆಯುತ್ತಿದ್ದೇವೆ. ಇಂದು ಮಹಿಳೆಯರು ಉನ್ನತ ಶಿಕ್ಷಣ ಪಡೆಯಲು ಅಂಬೇಡ್ಕರ್ ಅವರೇ ಕಾರಣ. ಭಾರತದ ಸಂವಿಧಾನವನ್ನು ಎಲ್ಲರೂ ಸರಿಯಾಗಿ ಓದಿಕೊಂಡರೆ ಯಾವ ಯಾವ ಕಲಂಗಳು ಇವೆ ಎಂದು ತಿಳಿದುಕೊಳ್ಳಲು ಸಾಧ್ಯ. ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು ನಾವೆಲ್ಲರೂ ಓದಬೇಕು ಮತ್ತು ತಿಳಿದುಕೊಳ್ಳಬೇಕು ಎಂದರು.
ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಸ್ನಾತಕೊತ್ತರ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು, ಸಿಬ್ಬಂದಿ ಉಪಸ್ಥಿತರಿದ್ದರು.
ಡಾ.ಸಕ್ಪಾಲ್ ಹೂವಣ್ಣ ಸ್ವಾಗತಿಸಿದರು. ಜೈವಿಕ ಮಾಹಿತಿ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ನಿರೂಪಿಸಿ, ವಂದಿಸಿದರು.

ಡಾ.ಅಂಬೇಡ್ಕರ್ ಅವರು ರಕ್ಷಕ, ದಾರ್ಶನಿಕ, ರಾಜನೀತಿಜ್ಞ, ಆಧುನಿಕ ಭೋಧಿಸತ್ವ ಎಂಬ ವಿವಿಧ ಹೆಸರುಗಳಿಂದ ಕರೆಯುತ್ತೇವೆ. ಸಂವಿಧಾನ ನಮಗೆ ಸಾಕಷ್ಟು ಹಕ್ಕುಗಳನ್ನು ನೀಡಿದೆ. ಹಕ್ಕು ಮಾತ್ರವಲ್ಲದೆ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ಕೂಡ ನೀಡಿದೆ. ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಡಾ.ಅಂಬೇಡ್ಕರ್ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ, ಅವರ ಸಿದ್ಧಾಂತಗಳು ನಮಗೆ ಮಾದರಿ.
ಪ್ರೊ.ಪಿ.ಜಿ. ತಡಸದ, ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...